You cannot copy content of this page.
. . .

ಉಪಚುನಾವಣೆ ಗದ್ದಲ ಹಿನ್ನೆಲೆ: ಚನ್ನರಾಯಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ನಿನ್ನೆ ರಾತ್ರಿ ಚನ್ನರಾಯಪಟ್ಟಣ ತಾಲೂಕಿನ ನಿಂಬೇಹಳ್ಳಿ ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ತಾಲೂಕಿನಾದ್ಯಂತ ಇಂದು ರಾತ್ರಿ 9.30ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

ರಾಜ್ಯದಲ್ಲಿ ಇಂದು 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ಪೈಕಿ ಕೆ.ಆರ್. ಪೇಟೆ ಮತ್ತು ಹುಣಸೂರು ಕ್ಷೇತ್ರ ಬಿಜೆಪಿ-ಜೆಡಿಎಸ್ ನಡುವೆ ಪ್ರತಿಷ್ಠೆಯ ಕಣವಾಗಿ ಬದಲಾಗಿದೆ. ಈ ಕ್ಷೇತ್ರಗಳ ಮತದಾರರಿಗೆ ಹಣ ಹಂಚಲು ಬಿಜೆಪಿ ಹಾಸನದ ಮೂಲಕ ಹಣವನ್ನು ಕ್ಷೇತ್ರಗಳಿಗೆ ಸಾಗಿಸುತ್ತಿದೆ ಎಂಬುದು ಜೆಡಿಎಸ್ ಆರೋಪ.

  ಇದೇ ಕಾರಣಕ್ಕೆ ಮಂಗಳವಾರ ರಾತ್ರಿಯೂ ಸಹ ಚನ್ನರಾಯಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ದೊಡ್ಡ ಮಟ್ಟದ ಗಲಾಟೆ ನಡೆದಿತ್ತು. ಇದರಲ್ಲಿ ಎರಡೂ ಪಕ್ಷದ ಕಾರ್ಯಕರ್ತರಿಗೆ ಗಾಯಗಳಾಗಿದ್ದವು. ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಪುತ್ರ ಡಾ. ಸೂರಜ್ ರೇವಣ್ಣ ಸೇರಿದಂತೆ ಐವರ ವಿರುದ್ಧ ಚನ್ನರಾಯಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

%d bloggers like this: