You cannot copy content of this page.
. . .

ಉಪಚುನಾವಣೆ: ಹುಣಸೂರಲ್ಲಿ ನಿಷೇಧಾಜ್ಞೆ, ಡಿ.5ಕ್ಕೆ ಸರ್ಕಾರಿ ರಜೆ

  ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಸುದ್ದಿಗೋಷ್ಠಿ ನಡೆಸಿ ಮತದಾನದ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು. ನಾಳೆ ಸಂಜೆ 6ಗಂಟೆಯಿಂದ ಡಿ. 5ರ ಮಧ್ಯರಾತ್ರಿವರೆಗೆ ಅನ್ವಯವಾಗುವಂತೆ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ. ಮತದಾನದ ದಿನದಂದು ಹುಣಸೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದ್ದು, ನಾಳೆ ಸಂಜೆ 6 ಗಂಟೆಯಿಂದ ಡಿ.5ರ ಮಧ್ಯರಾತ್ರಿವರೆಗೆ ಮದ್ಯ ಬಂದ್‍ ಮಾಡಲಾಗುತ್ತದೆ ಎಂದು ಹೇಳಿದರು.

  ಡಿಸೆಂಬರ್ 5 ರಂದು ಬೆಳಿಗ್ಗೆ 7ಗಂಟೆಯಿಂದ ಸಂಜೆ 6ರವರಗೆ  ಮತದಾನ ನಡೆಯಲಿದೆ. ಚುನಾವಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳನ್ನು ಮತಗಟ್ಟೆಗಳಿಗೆ ಕರೆದೊಯ್ಯಲು 45 KSRTC ಬಸ್ , 3 ಮ್ಯಾಕ್ಸಿಕ್ಯಾಬ್ ಹಾಗೂ 1 ಜೀಪ್ ನ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮತಕೇಂದ್ರಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.  

  ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ಕಣದಲ್ಲಿದ್ದು, ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 274 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಡಿಸೆಂಬರ್ 9 ರಂದು ಹುಣಸೂರಿನ ಡಿ. ದೇವರಾಜು ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕೇಂದ್ರಕ್ಕೆ 3 ಸುತ್ತಿನ ಭದ್ರತೆ ಒದಗಿಸಲಾಗುತ್ತಿದೆ ಎಂದು ಅಭಿರಾಮ್ ಜಿ ಶಂಕರ್ ತಿಳಿಸಿದರು.

 

%d bloggers like this: