You cannot copy content of this page.
. . .

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ವೈದ್ಯಕೀಯ ಕಾಲೇಜು; ಸಿಎಂ ಭರವಸೆ

  ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
  ಮಡಿಕೇರಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಆಸ್ಪತ್ರೆ 350 ಹಾಸಿಗೆ ಸಾಮರ್ಥ್ಯ ಹೊಂದಿದೆ. 100 ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯದ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈಗಾಗಲೇ ಹಾವೇರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜು ಇರಬೇಕೆಂಬುದು ನಮ್ಮ ಉದ್ದೇಶ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಶೀಘ್ರದಲ್ಲಿ ಉದ್ದೇಶವನ್ನು ಈಡೇರಿಸಲಾಗುವುದು ಎಂದರು.

 

 

%d bloggers like this: