You cannot copy content of this page.
. . .

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಮೂರು ಟಗರು!

 ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದ ವೇದಿಕೆಯಲ್ಲಿ ಟಗರು ಎಂದೇ ಚಿರಪರಿಚಿತರಾದ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಅಡಗೂರು ಎಚ್.ವಿಶ್ವನಾಥ್‍ ಒಟ್ಟಿಗೆ ಕಾಣಿಸಿಕೊಂಡು ಅಚ್ಚರಿಸಿ ಮೂಡಿಸಿದರು.

 ಸಿದ್ದರಾಮಯ್ಯ ಹಾಗೂ ಕೆ.ಎಸ್.ಈಶ್ವರಪ್ಪ ಒಂದೇ ಕಾರಿನಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿದರು. ರಾಜಕೀಯ ವೈರತ್ವ ಮರೆತು ನಾಯಕರು ಪರಸ್ಪರ ವೇದಿಕೆ ಹಂಚಿಕೊಂಡರು. ಬಹುದಿನಗಳ ನಂತರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ಬೆಂಬಲಿಗರಲ್ಲಿ ಒಂದೆಡೆ ಅಚ್ಚರಿ ಮತ್ತೊಂದೆಡೆ ಸಂತಸಕ್ಕೆ ಕಾರಣವಾಯಿತು.

 ರಾಜಕೀಯ ವೈರಿಗಳು ಒಂದೇ ವೇದಿಕೆಯಲ್ಲಿ ಕುಳಿತು ಆತ್ಮೀಯವಾಗಿ ಮಾತುಕತೆ ನಡೆಸಿದರು. ಪರಸ್ಪರ ಕೈ ಹಿಡಿದು ದೀಪ ಬೆಳಗಿದರು.

 

%d bloggers like this: