You cannot copy content of this page.
. . .

ಕೆಪಿಸಿಸಿ ಸಾರಥಿ ನಾಳೆ ಅಂತಿಮ?

 ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್‍ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಿದ್ದಾರೆ.

 ನಾಳೆ (ಮಂಗಳವಾರ) ಇದೇ ವಿಚಾರವಾಗಿ ಹೈಕಮಾಂಡ್‍ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬ ವಿಚಾರ ನಾಳೆಗೆ ಅಂತಿಮವಾಗುವ ಸಾಧ್ಯತೆ ಇದೆ.

 ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾದ ಅನರ್ಹ ಶಾಸಕರ ಸ್ಥಾನಗಳಿಗೆ ಈಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‍ ಮತ್ತು ಜೆಡಿಎಸ್‍ಗೆ ತೀವ್ರ ಮುಖಭಂಗವಾಗಿಯಿತು. ತಮ್ಮ ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತು ವಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‍ ಗುಂಡೂರಾವ್ ರಾಜೀನಾಮೆ ನೀಡಿದ್ದರು. ಈ ನಡುವೆ ಕಾಂಗ್ರೆಸ್‍ನ ಹಿರಿಯ ನಾಯಕರು ಕೆಪಿಸಿಸಿ ಸಾರಥಿ ಆಗುವ ಆಕಾಂಕ್ಷೆ ವ್ಯಕ್ತಪಡಿಸಿದ್ದರು.  

Leave a Reply

 

%d bloggers like this: