You cannot copy content of this page.
. . .

ಕ್ರಿಮಿನಲ್ ಗಳಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಕಾರಣ ಕೊಡಿ..

  ಅಪರಾಧ ಪ್ರಕರಣಗಳಿರುವ ಅಭ್ಯರ್ಥಿಗಳನ್ನು ಯಾಕೆ ಆಯ್ಕೆ ಮಾಡಿದ್ದೀರಿ ಎಂಬುದಕ್ಕೆ ಕಾರಣ ನೀಡಿ ಎಂದು ಸುಪ್ರೀಂಕೋರ್ಟ್ ರಾಜಕೀಯ ಪಕ್ಷಗಳಿಗೆ ತಾಕೀತು ಮಾಡಿದೆ. ಕ್ರಿಮಿನಲ್‍ ಕೇಸ್‍ ಹೊಂದಿರುವ ವ್ಯಕ್ತಿಯನ್ನು ನಿಮ್ಮ ಪಕ್ಷದ  ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಗೆಲ್ಲುವ ಅಭ್ಯರ್ಥಿ ಎಂಬುದನ್ನು ಬಿಟ್ಟು ಬೇರೆ ಯಾವ ಅಂಶ ಕಾರಣವಾಗಿದೆ ಎಂಬುದಕ್ಕೆ ವಿವರಣೆ ಕೊಡಿ ಎಂದು ಕೋರ್ಟ್‍ ಕೇಳಿದೆ.

  ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಅಪರಾಧ  ದಾಖಲೆಗಳನ್ನು 48 ಗಂಟೆಯೊಳಗೆ ಪಕ್ಷದ ವೆಬ್‌ಸೈಟ್‌ಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಬಿಜೆಪಿ ನಾಯಕ ಮತ್ತು ನ್ಯಾಯಮೂರ್ತಿ ಅಶ್ವಿನ್ ಕೆ ಉಪಾಧ್ಯಾಯ್ ಸಲ್ಲಿಸಿದ  ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ಅವರು ಸಂವಿಧಾನದ 142ನೇ ವಿಧಿಯಡಿಯಲ್ಲಿ ಈ ಆದೇಶ ನೀಡಿದ್ದಾರೆ. 

  ಅಪರಾಧ ಪ್ರಕರಣಗಳಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರ ಬಗ್ಗೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಬೇಕು. ಒಂದು ವೇಳೆ ರಾಜಕೀಯ ಪಕ್ಷಗಳು ಈ ನಿರ್ದೇಶನವನ್ನು ಪಾಲಿಸದೇ ಇದ್ದರೆ ಈ ಬಗ್ಗೆ ನಿಂದನಾ ಅರ್ಜಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ಹೇಳಿದೆ.

Leave a Reply

 

%d bloggers like this: