You cannot copy content of this page.
. . .

ಜಾರಿ ನಿರ್ದೇಶನಾಲಯ ನೋಟಿಸ್: ಕೆ.ಜೆ.ಜಾರ್ಜ್‍ ಗೆ ಬಂಧನದ ಭೀತಿ

  ಮಾಜಿ ಸಚಿವ, ಕಾಂಗ್ರೆಸ್ ನಾಯಕ ಕೆ.ಜೆ.ಜಾರ್ಜ್‌ ಹಾಗೂ ಅವರ ಕುಟುಂಬ ಸದಸ್ಯರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಜನವರಿ 16 ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ.

  ಡಿ.ಕೆ.ಶಿವಕುಮಾರ್ ಬಳಿಕ ಮತ್ತೊಬ್ಬ ಕಾಂಗ್ರೆಸ್ ಪ್ರಭಾವಿ ನಾಯಕರಿಗೆ ಇಡಿ ಸಂಕಷ್ಟ ಎದುರಾಗಿದೆ. ನವೆಂಬರ್‌ನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಜಾರಿ ನಿರ್ದೇಶನಾಲಯಕ್ಕೆ ಕೆ.ಜೆ.ಜಾರ್ಜ್ ಮತ್ತು ಕುಟುಂಬ ಸದಸ್ಯರ ವಿರುದ್ಧ ದೂರು ನೀಡಿದ್ದರು. ಈ ದೂರಿನ ಅನ್ವಯ ಇಡಿ ಪ್ರಕರಣ ದಾಖಲು ಮಾಡಿಕೊಂಡಿತ್ತು. ಕೆ.ಜೆ.ಜಾರ್ಜ್ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದಾಗ ದೇಶ ವಿದೇಶದಲ್ಲಿ ಭಾರಿ ಪ್ರಮಾಣದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ರವಿಕೃಷ್ಣಾರೆಡ್ಡಿ ದೂರು ನೀಡಿದ್ದಾರೆ.

  ಮಾಜಿ ಸಚಿವ ಕೆ.ಜೆ.ಜಾರ್ಜ್, ಜಾರ್ಜ್ ಪತ್ನಿ, ಪುತ್ರಿ ರೆನಿಟಾ, ಪುತ್ರ ರಾಣಾಗೆ ಸಮನ್ಸ್ ನೀಡಿದೆ. ಜನವರಿ 16ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ. ಕೆ.ಜೆ.ಜಾರ್ಜ್ ಪುತ್ರಿ ರೆನಿಟಾ ಅಬ್ರಾಹಂ ಮತ್ತು ಅಳಿಯ ಕೆವಿನ್ ಅಬ್ರಾಹಂ ನ್ಯೂಯಾರ್ಕ್‌ನಲ್ಲಿ ವಾಸವಾಗಿದ್ದಾರೆ ಎಂದು ಹೇಳಿದ್ದರು.

Leave a Reply

 

%d bloggers like this: