You cannot copy content of this page.
. . .

ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ: ಎಸ್ಡಿಪಿಐ ಹೇಳಿಕೆ ಬಿಡುಗಡೆ

   ಶಾಸಕ ತನ್ವೀರ್‍ ಸೇಠ್‍ ಕೊಲೆ ಯತ್ನ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೇಮಾಕರ್ಟಿಕ್  ಪಾರ್ಟಿ ಆಫ್ ಇಂಡಿಯಾ(ಎಸ್ ಡಿ ಪಿ ಐ) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ನೂರಾರು ಜನರ ಸಮ್ಮುಖದಲ್ಲೇ ಶಾಸಕರ ಮೇಲೆ ಕೊಲೆ ಯತ್ನ ನಡೆದಿರುವುದು ಆತಂಕಕಾರಿ ಬೆಳವಣಿಗೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಎಸ್‍ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಎನ್‍ಆರ್‍ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ.

  ಈಗಾಗಲೇ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಸಮಗ್ರ ತನಿಖೆ ನಡೆಸಿ, ಕೃತ್ಯದ ಹಿಂದಿನ ಉದ್ದೇಶವನ್ನು ಬಯಲು ಮಾಡಬೇಕೆಂದು ಅಬ್ದುಲ್‍ ಮಜೀದ್‍ ಮಾಧ್ಯಮ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

 

%d bloggers like this: