You cannot copy content of this page.
. . .

ತಮಿಳುನಾಡಿನಲ್ಲಿ ಭಾರೀ ಮಳೆ: ಕಾಂಪೌಂಡ್‍ ಗೆ 15 ಬಲಿ

   ಭಾರೀ ಮಳೆಯಿಂದಾಗಿ ನಾಲ್ಕು ಮನೆಗಳ ಮೇಲೆ ಕಾಂಪೌಂಡ್ ಕುಸಿದು 2 ಮಕ್ಕಳು, 10 ಮಹಿಳೆಯರು ಸೇರಿ 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನಲ್ಲಿ ನಡೆದಿದೆ,

   ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಳಯಂನ ನಾಡೂರ್ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

   ಭಾನುವಾರ ರಾತ್ರಿಯಿಂದ ತಮಿಳುನಾಡಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ತಿರುವಳ್ಳೂರ್, ವೆಲ್ಲೂರ್, ತಿರುವಣ್ಣಾಮಲೈ, ತೂತ್ತುಕುಡಿ, ರಾಮನಾಥಪುರಂ ಮತ್ತು ತಿರುನಲ್ವೇಲಿ ಜಿಲ್ಲೆಗಳಲ್ಲಿ ಮನೆಗಳು, ಗೋಡೆಗಳು ಕುಸಿದುಬಿದ್ದು ಅನಾಹುಗಳಾಗಿವೆ. ಮುಂದಿನ 24 ಗಂಟೆಗಳವರೆಗೂ ಭಾರೀ ಮಳೆಯಾಗುತ್ತದೆಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

 

%d bloggers like this: