You cannot copy content of this page.
. . .

ನದಿಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳ ದುರ್ಮರಣ

 ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಇಂದು (ಶುಕ್ರವಾರ) ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

 ಮುದಾಸಮ್ (18), ತೌಸಿಫ್‍ (19), ಇಫ್ತೀಕಾರ್ (19) ಮೃತಪಟ್ಟ ವಿದ್ಯಾರ್ಥಿಗಳು. ಇವರು ಹಾಸನ ಜಿಲ್ಲೆಯವರಾಗಿದ್ದು, ಮೈಸೂರಿನ ಸಿದ್ದಿಖಿಯ ಅರೆಬಿಕ್ ಉರ್ದು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ.

 ಶಭುಲಿಂಗಯ್ಯನ ಕಟ್ಟೆ ಬಳಿ ನದಿಯಲ್ಲಿ ಈಜಾಡಲು ತೆರಳಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಓರ್ವನ ಶವ ಪತ್ತೆಯಾಗಿದ್ದು, ಮತ್ತಿಬ್ಬರ ಶವಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

 

%d bloggers like this: