You cannot copy content of this page.
. . .

ನಿರ್ಭಯಾ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿ ಅಸ್ವಸ್ಥ

 ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅರ್ಜಿಯ ವಿಚಾರಣೆ ವೇಳೆ ಮಹಿಳಾ ನ್ಯಾಯಮೂರ್ತಿ ಕುಸಿದುಬಿದ್ದ ಘಟನೆ ನಡೆದಿದೆ. ಸುಪ್ರೀಂಕೋರ್ಟ್ ಮಹಿಳಾ ನ್ಯಾಯಮೂರ್ತಿ ಆರ್.ಭಾನುಮತಿ ಅವರಿಗೆ ವಿಚಾರಣೆ ವೇಳೆ ಸ್ವಲ್ಪ ಹೊತ್ತು ಪ್ರಜ್ಞೆ ತಪ್ಪಿದಂತಾಗಿತ್ತು. ಬಳಿಕ ತಕ್ಷಣವೇ ಸಾವರಿಸಿಕೊಂಡ ಅವರನ್ನು ಗಾಲಿ ಕುರ್ಚಿಯ ಮೂಲಕ ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ಯಲಾಯಿತು ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

  ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸಲು ಅನುಮತಿ ನೀಡಬೇಕೆಂದು ಕೆಂದ್ರ ಸರ್ಕಾರ ಮನವಿ ಸಲ್ಲಿಸಿತ್ತು. ನಾಲ್ವರು ಅಪರಾಧಿಗಳಲ್ಲಿ ಒಬ್ಬನನ್ನು ಹೊರತುಪಡಿಸಿ ಉಳಿದವರೆಲ್ಲರಿಗಿದ್ದ ಕಾನೂನು ಮಾರ್ಗಗಳು ಮುಚ್ಚಿರುವುದರಿಂದ ಅವರನ್ನು ಗಲ್ಲಿಗೇರಿಸಲು ಅನುವು ಮಾಡಿಕೊಡಬೇಕೆಂದು ಕೇಂದ್ರದ ಪರ ವಕೀಲರು ವಾದ ಮಂಡಿಸಿದರು.

Leave a Reply

 

%d bloggers like this: