You cannot copy content of this page.
. . .

ಪೊಲೀಸ್‍ ವೇಷದಲ್ಲಿ ಬಂದು ಮಹಿಳೆ ಮೇಲೆ ಅತ್ಯಾಚಾರ

    ಪೊಲೀಸರ ವೇಷದಲ್ಲಿ ಬಂದು ಬಸ್‍ ನಲ್ಲಿದ್ದ 32 ವರ್ಷದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

   ಇಬ್ಬರು ವ್ಯಕ್ತಿಗಳು ಪೊಲೀಸ್ ವೇಷ ಧರಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬಳಿ ತೆರಳಿ ನಿಷೇಧಿತ ಗುಟ್ಕಾ ಪ್ಯಾಕೇಟ್ ಗಳನ್ನು ಸಾಗಿಸುತ್ತಿರುವುದಾಗಿ ಆರೋಪಿಸಿ ಬಸ್ ನಿಂದ ಕೆಳಗಿಳಿಸಿದ್ದಾರೆ. ಇದೇ ವೇಳೆ ಮತ್ತೊಬ್ಬ ಆರೋಪಿ ಕಾರಿನಲ್ಲಿ ಬಸ್ ಅನ್ನು ಹಿಂಬಾಸಿ ಬಂದಿದ್ದಾನೆ. ನಂತರ ಮೂವರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ತಿಳಿದು ಬಂದಿದೆ.

  ಅತ್ಯಾಚಾರಕ್ಕೊಳಗಾದ ಮಹಿಳೆ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದು, ನೆರೆಯ ಕರ್ನಾಟಕದ ಬೀದರ್ ಜಿಲ್ಲೆಯಿಂದ ಗುಟ್ಕಾ ಖರೀದಿಸಿ ಬಸ್ ನಲ್ಲಿ ವಾಪಸ್ ಮರಳುತ್ತಿದ್ದರು. ಈ ವೇಳೆ ಈ ಕೃತ್ಯ ಎಸಗಲಾಗಿದೆ ಎಂದು ಜಹೀರಾಬಾದ್ ನಗರದ ಸಿದ್ದೇಶ್ವರ್ ಸರ್ಕಲ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

Leave a Reply

 

%d bloggers like this: