You cannot copy content of this page.
. . .

ಪ್ರಜ್ವಲ್ ರೇವಣ್ಣಗೆ ರಿಲೀಫ್ ನೀಡಿದ ಹೈಕೋರ್ಟ್

  ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಸಿಹಿ ಸುದ್ದಿ ನೀಡಿದೆ. ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದ ಬಿಜೆಪಿಯ ಎ.ಮಂಜು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಕೋರ್ಟ್‍, ಎ. ಮಂಜು ಅರ್ಜಿ ಸಲ್ಲಿಸುವಾಗ ಪ್ರಮಾಣ ಪತ್ರವನ್ನು ಸಲ್ಲಿಸಿರಲಿಲ್ಲ ಎಂದು ಹೇಳಿದೆ.

  ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ನೇತೃತ್ವದ ಏಕ ಸದಸ್ಯ ಪೀಠ ಎ. ಮಂಜು ಸಲ್ಲಿಸಿದ್ದ ಅರ್ಜಿಯನ್ನು ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕರಿಸಲಾಗಿದೆ ಎಂದು ಹೇಳಿದೆ. ಚುನಾವಣಾ ಅಕ್ರಮದ ಆರೋಪ ಮಾಡುವಾಗ ಅರ್ಜಿದಾರರು ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅರ್ಜಿಯ ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪರ ವಾದ ಮಂಡನೆ ಮಾಡಿದ್ದ ವಕೀಲ ಎಂ. ಕೇಶವ ರೆಡ್ಡಿ, ಅರ್ಜಿದಾರ ಎ. ಮಂಜು ನಿಯಮಾನುಸಾರ ದಾಖಲೆ ಸಲ್ಲಿಸಿಲ್ಲ. ಅರ್ಜಿಯನ್ನು ತಿರಸ್ಕರಸಬೇಕು ಎಂದು ವಾದಿಸಿದ್ದರು. ನ್ಯಾಯಾಲಯ ಈ ವಾದವನ್ನು ಪುರಸ್ಕರಿಸಿತು.

  ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಆಸ್ತಿಗಳಿಕೆ ಮಾಡಿದ್ದಾರೆ. ಹಲವು ಕಂಪನಿಗಳಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ಆಸ್ತಿ ಘೋಷಣೆ ಮಾಡುವಾಗ ಪ್ರಮಾಣ ಪತ್ರದಲ್ಲಿ ಇದನ್ನು ಉಲ್ಲೇಖಿಸಿಲ್ಲ ಎಂಬುದು ಎ. ಮಂಜು ಆರೋಪ.

 

%d bloggers like this: