You cannot copy content of this page.
. . .

ಪ್ರತ್ಯೇಕ ಪ್ರಕರಣ; ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

 ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಮಾರಾಟ ಮಾಡಲು ಮುಂದಾಗಿದ್ದ ಇಬ್ಬರು ಆರೋಪಿಗಳನ್ನು ಮಂಡಿ ಹಾಗೂ ಮೇಟಗಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದು, ಆರೋಪಿಗಳಿಂದ ೨೦೦ ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

 ಮಂಡಿಮೊಹಲ್ಲಾ ನಿವಾಸಿ ಸಾದಿಕ್ ಪಾಷಾ ಎಂಬಾತ ಪ್ಲಾಸ್ಟಿಕ್ ಕವರ್‌ನಲ್ಲಿ ಗಾಂಜಾ ಇಟ್ಟುಕೊಂಡಿದ್ದನು. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಆತನ ಬಳಿ ಇದ್ದ ೧೪೬ ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

 ಅಂತೆಯೇ ಬಿಎಂಶ್ರೀ ನಗರದಲ್ಲಿ ಪೊಲೀಸರು ಗಸ್ತಿನಲ್ಲಿದ್ದಾಗ ಹೃತಿಕ್ ಎಂಬಾತ ಪ್ಲಾಸ್ಟಿಕ್ ಕವರ್‌ನಲ್ಲಿ ಗಾಂಜ ಇಟ್ಟುಕೊಂಡು ಸಿಕ್ಕಿಬಿದ್ದಿದ್ದಾನೆ. ಆತನನ್ನು ಬಂಧಿಸಿದ ಪೊಲೀಸರು ೫೦ ಗ್ರಾಂ ಗಾಂಜ ಹಾಗೂ ಪಲ್ಸರ್ ಬೈಕ್‌ನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೇಟಗಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

%d bloggers like this: