You cannot copy content of this page.
. . .

ಪ್ರಿಯಕರನ ಕಿರುಕುಳ ತಾಳದೆ ಯುವತಿ ಆತ್ಮಹತ್ಯೆ

 ಪ್ರಿಯಕರನ ಕಾಟ ತಾಳದೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಬ್ಯಾಡಗೊಟ್ಟ ಗ್ರಾಮದ ನಿವಾಸಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 ಮೃತ ಯುವತಿ ಪೂಜಾ ಹಾಗೂ ಕೂಡ್ಲೂರು ಗ್ರಾಮದ ಯುವಕ ಪವನ್ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ತಿಳಿದ ಪೋಷಕರು, ಯುವತಿಯನ್ನು ಸುಳ್ಯದ ಖಾಸಗಿ ಕಾಲೇಜಿಗೆ ಸೇರಿಸಿದ್ದರು. ಆದರೆ, ಪವನ್‌ ಪದೇ ಪದೇ ಪೂಜಾಳಿಗೆ ಕರೆ ಮಾಡುತ್ತಿದ್ದ. ಈ ವಿಚಾರವನ್ನು ಯುವತಿ ತನ್ನ ಪೋಷಕರಿಗೆ ತಿಳಿಸಿದ್ದರು. ಹೀಗಾಗಿ ಪೋಷಕರು ಮಗಳನ್ನು ಕಾಲೇಜು ಬಿಡಿಸಿ ಮನೆಯಲ್ಲೇ ಇರಿಸಿದ್ದರು.

  ಮಾನಸಿಕವಾಗಿ ನೊಂದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದುಬಂದಿದೆ. ಅವಳ ಸಾವಿಗೆ ಪವನ್‌ ಕಾರಣ ಎಂದು ಆಕೆ ಪೋಷಕರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನಂದೀಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

Leave a Reply

 

%d bloggers like this: