You cannot copy content of this page.
. . .

ಮಹಾ‘ರಾಷ್ಟ್ರಪತಿ’ ಆಡಳಿತ: ರಾಮನಾಥ್ ಕೋವಿಂದ್ ಅಂಕಿತ

     ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ರಾಷ್ಟ್ರಪತಿ ರಾಮನಾಥ್‍ ಕೋವಿಂದ್ ಅಂಕಿತ ಹಾಕಿದ್ದಾರೆ. ಶಿವಸೇನೆ ಬಿಜೆಪಿ ಸಖ್ಯ ತೊರೆದಿದ್ದರಿಂದ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿತ್ತು. ಅತಿದೊಡ್ಡ ಪಕ್ಷವಾದ ಬಿಜೆಪಿ ಸರ್ಕಾರ ರಚನೆಯಿಂದ ಹಿಂದೆ ಸರಿದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಮೊದಲು ಶಿವಸೇನೆ, ಅನಂತರ ಎನ್‍ಸಿಪಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸುವಂತೆ ಗಡವು ನೀಡಿದ್ದರು.

ಎನ್‍ಸಿಪಿ ಮಂಗಳವಾರ ರಾತ್ರಿ 8.30ರವರೆಗೆ ಹಕ್ಕು ಮಂಡನೆಗೆ ಅವಕಾಶವಿತ್ತು. ಈ ಬೆನ್ನಲ್ಲೇ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕೇಂದ್ರಕ್ಕೆ ವರದಿ ಸಲ್ಲಿಸಿದ್ದರು. ಕೂಡಲೇ ಕೇಂದ್ರ ಸಚಿವ ಸಂಪುಟ ಸಭೆ ಕರೆಯಲಾಯಿತು. ಸಭೆಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಲು ತೀರ್ಮಾನ ಮಾಡಲಾಯಿತು. ಶಿಫಾರಸನ್ನು ರಾಷ್ಟ್ರಪತಿಗೆ ಕಳುಹಿಸಿಕೊಡಲಾಯಿತು. ರಾಷ್ಟ್ರಪತಿ ರಾಮನಾಥ ಕೋವಿಂದ್‍ ಕೂಡಲೇ ಅದಕ್ಕೆ ಅಂಕಿತ ಹಾಕಿದರು.

  ಅಕ್ಟೋಬರ್ 21ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಶಿವಸೇನೆ ಪಕ್ಷಗಳು 161 ಸ್ಥಾನಗಳನ್ನು ಗೆದ್ದುಕೊಂಡಿದ್ದವು. ಬಿಜೆಪಿ 105, ಶಿವಸೇನೆ 56 ಸ್ಥಾನಗಳನ್ನು ಗೆದ್ದಿದ್ದವು. ಆದರೆ, ಅಧಿಕಾರ ಹಂಚಿಕೆ ಕುರಿತು ಎರಡೂ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಸ್ವತಂತ್ರವಾಗಿ ಯಾರಿಗೂ ಸರ್ಕಾರ ರಚನೆಗೆ ಬೇಕಾದ 145 ಸ್ಥಾನಗಳ ಬಲ ಇಲ್ಲದಿದ್ದುದರಿಂದ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದೆ.

 

%d bloggers like this: