You cannot copy content of this page.
. . .

ಮಾರ್ಚ್ ನಿಂದ ಶಾಲಾ ಮಕ್ಕಳು, ಶಿಕ್ಷಕರಿಗಾಗಿ ಸಹಾಯವಾಣಿ

   ಮಾರ್ಚ್‍ ನಿಂದ ಶಾಲಾ ಮಕ್ಕಳು ಹಾಗೂ ಶಿಕ್ಷಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಹಾಯವಾಣಿ ತೆರೆಯಲಾಗುವುದೆಂದು ಶಿಕ್ಷಣ ಸಚಿವ ಸುರೇಶ್‍ ಕುಮಾರ್‍ ಹೇಳಿದ್ದಾರೆ.

  ಮೈಸೂರಿನ ಕೌಟಿಲ್ಯ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಶಾಲಾ ಮಕ್ಕಳು ಹಾಗೂ ಶಿಕ್ಷಕರು ಸಹಾಯವಾಣಿಗೆ ಕರೆ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದು. ಅದಕ್ಕೆ ಅತ್ಯಂತ ಶೀಘ್ರಗತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

  ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಎರಡು ದಿನ ಬ್ಯಾಗ್‍ ಲೆಸ್‍ ಡೇ ಮಾಡಲು ನಿರ್ಧರಿಸಿದ್ದೇವೆ. ಈ ದಿನಗಳಲ್ಲಿ ಮಕ್ಕಳಲ್ಲಿ ಪೌರ ಪ್ರಜ್ಞೆ ಮೂಡಿಸುವ ಸಲುವಾಗಿ ಹಲವು ಚಟುವಟಿಕೆಗಳನ್ನು ಹೇಳಿಕೊಡಲಾಗುತ್ತದೆ ಎಂದರು. ಇನ್ನು ಬ್ಯಾಗ್‍ ಹೊರೆಯಾಗುತ್ತಿರುವುದರ ಬಗ್ಗೆ ಮಾತನಾಡಿದ ಅವರು, ಮಕ್ಕಳು ಕಾರ್ಮಿಕರ ರೀತಿ ಶಾಲೆಗೆ ಹೋಗುವುದು ಸರಿಯಾಗುವುದಿಲ್ಲ. ಹೀಗಾಗಿ ಬ್ಯಾಗ್‍ ಹೊರೆ ಇಳಿಸುವ ಕುರಿತು ಚಿಂತನೆ ನಡೆಸಿದರು.

  ಬೆಂಗಳೂರಿನ ಶಾಲೆಗಳ ಬಳಿ ಡ್ರಗ್ಸ್‍ ದಂಧೆ ಹೆಚ್ಚಾಗಿದ್ದು, ಬೇರೆ ನಗರಗಳಿಗೂ ಹಬ್ಬುತ್ತಿದೆ. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್‍ ಕುಮಾರ್‍ ಅವರು ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರಿಸಿದರು.

 

%d bloggers like this: