You cannot copy content of this page.
. . .

ಮೀಸಲಾತಿ; ಸುಪ್ರೀಂ ಆದೇಶ ಆಘಾತಕಾರಿ: ಮಹದೇವಪ್ಪ

 ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದಿರುವ ಸವೋರ್ಚ್ಚ ನ್ಯಾಯಾಲಯದ ಆದೇಶ ಆಘಾತಕಾರಿಯಾಗಿದೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
 ಮೈಸೂರಿನಲ್ಲಿ ಇಂದು (ಶುಕ್ರವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರಾಖಂಡಕ್ಕೆ ಸಂಬಂದಫಟ್ಟಂತೆ ಸುಪ್ರೀಂ ನೀಡಿರುವ ತೀರ್ಪು ಆಘಾತಕಾರಿಯಾಗಿದೆ. ಶತ ಶತಮಾನಗಳಿಂದ ಶೋಷಣೆಗೆ ಒಳಗಾಗಿರುವ ಶೋಷಿತರ ವರ್ಗದ ನಿದ್ದೆ ಗೆಡಿಸಿದೆ. ಈ ತೀರ್ಪು ಸಂವಿಧಾನಕ್ಕೆ ಧಕ್ಕೆ ಉಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಮೀಸಲಾತಿ, ಸಂವಿಧಾನವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಸಂವಿಧಾನ ಜಾರಿಯಾದ ದಿನದಿಂದಲೂ ಇದರ ವಿರುದ್ಧ ನಡೆದುಕೊಳ್ಳುತ್ತದೆ ಎಂದು ಕಿಡಿಕಾರಿದರು.
  ಸಂವಿಧಾನ ಪರಿಚ್ಚೇದ ೧೬/೪ಎ , ೧೬ಬಿ ಮೀಸಲಾತಿ ಸಾಂವಿಧಾನಿಕ ಹಕ್ಕು ಎಂದು ಉಲ್ಲೇಖಿಸಲಾಗಿದೆ. ಆದರೂ ಮೀಸಲಾತಿ ರದ್ದುಗೊಳಿಸಿ ಶೋಷಿತ ಸಮುದಾಯಗಳನ್ನು ದಮನ ಮಾಡುವ ಕಾರ್ಯ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Leave a Reply

 

%d bloggers like this: