You cannot copy content of this page.
. . .

ಮುಷರಫ್ ಮರಣದಂಡನೆ ಶಿಕ್ಷೆ ರದ್ದುಗೊಳಿಸಿದ ಕೋರ್ಟ್

   ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷಾರಫ್ ಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಪಾಕ್ ನ್ಯಾಯಾಲಯ ರದ್ದುಗೊಳಿಸಿದೆ. ಮುಷರಫ್ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸಲು ರಚಿಸಲಾಗಿದ್ದ ವಿಶೇಷ ನ್ಯಾಯಮಂಡಳಿಯೇ ಅಸಂವಿಧಾನಿಕ ಎಂದು ಲಾಹೋರ್ ಹೈಕೋರ್ಟ್ ನ್ಯಾಯಪೀಠ ಅಭಿಪ್ರಾಯಪಟ್ಟಿದ್ದು, ಶಿಕ್ಷೆಯನ್ನೇ ರದ್ದುಗೊಳಿಸಿ ಆದೇಶ ಹೊರಡಿಸಿದೆ. ನ್ಯಾ. ಸಯದ್ ಮಜಹರ್ ಅಲಿ ಅಕ್ಬರ್ ನಖ್ವಿ, ನ್ಯಾ. ಮೊಹಮ್ಮದ್ ಅಮೀರ್ ಭಟ್ಟಿ ಮತ್ತು ನ್ಯಾ. ಚೌಧರಿ ಮಸೂದ್ ಜಹಾಂಗೀರ್ ಅವರಿದ್ದ ತ್ರಿಸದಸ್ಯ ನ್ಯಾಯಪೀಠವು ಈ ಮಹತ್ವದ ತೀರ್ಪು ನೀಡಿದೆ.

  ಪಾಕಿಸ್ತಾನದಿಂದ ಸ್ವಯಂ ಗಡಿಪಾರಾಗಿರುವ ಪರ್ವೇಜ್ ಮುಷರಫ್ ವಿರುದ್ಧ ಪಿಎಂಎಲ್ ಪಕ್ಷ 2013ರಲ್ಲಿ ದೇಶದ್ರೋಹ ಪ್ರಕರಣ ದಾಖಲಿಸಿತ್ತು. 2007ರಲ್ಲಿ ಅಧ್ಯಕ್ಷರಾಗಿದ್ದಾಗ ಪರ್ವೇಜ್ ಮುಷರಫ್ ಅವರು ಸಂವಿಧಾನಕ್ಕೆ ವಿರುದ್ಧವಾಗಿ ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಈ ಸಂದರ್ಭದಲ್ಲಿ ಪಾಕಿಸ್ತಾನದಾದ್ಯಂತ ಅನೇಕ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ಬಂಧನಕ್ಕೊಳಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪಿಎಂಎಲ್ ಪಕ್ಷ ದೇಶದ್ರೋಹದ ದೂರು ನೀಡಿತ್ತು. ಇಸ್ಲಾಮಾಬಾದ್​ನ ವಿಶೇಷ ಕೋರ್ಟ್​ನಲ್ಲಿ 6 ವರ್ಷಗಳ ಸುದೀರ್ಘ ವಿಚಾರಣೆ ನಡೆಯಿತು. ಡಿಸೆಂಬರ್ 17ರಂದು ಮುಷರಫ್ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿತ್ತು.

Leave a Reply

 

%d bloggers like this: