You cannot copy content of this page.
. . .

ಮೈಸೂರು ಜಿಲ್ಲೆಯಲ್ಲಿ ಮೊದಲ ದಿನವೇ ಶೇ. 95 ಮಕ್ಕಳಿಗೆ ಪೊಲಿಯೊ ಲಸಿಕೆ

 ಮೈಸೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಭಾನುವಾರ ಚಾಲನೆ ನೀಡಿದ ಪಲ್ಸ್ ಪೊಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಮೊದಲ ದಿನವೇ 2,31,994 ಮಕ್ಕಳಿಗೆ ಪೊಲಿಯೊ ಲಸಿಕೆ ಹಾಕಲಾಗಿದೆ. ನಗರದಲ್ಲಿ ಮಾಜಿ ಸಚಿವರಾದ ಜಿ.ಟಿ.ದೇವೇಗೌಡ ಹಾಗೂ ಎಸ್‍.ಎ.ರಾಮದಾಸ್‍ ಮಕ್ಕಳಿಗೆ ಲಸಿಕೆ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

 ಜಿಲ್ಲೆಯಲ್ಲಿ 5 ವರ್ಷದೊಳಗಿನ 2,43,641 ಮಕ್ಕಳನ್ನು ಗುರುತಿಸಿದ್ದು, ಮೊದಲ ದಿನದಂದೆ ಶೇ.95.10 ರಷ್ಟು ಮಕ್ಕಳಿಗೆ ಲಸಿಕೆ ಹಾಕವ ಮೂಲಕ ಕಾರ್ಯಕ್ರಮವು ಯಶಸ್ವಿಯಾಗಿದೆ. ಪೊಲಿಯೊ ಲಸಿಕೆ ಕಾರ್ಯಕ್ರಮಕ್ಕೆಂದೆ ಜಿಲ್ಲೆಯ ಸಾರ್ವಜನಿಕ ಪ್ರದೇಶಗಳು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 1,652 ಲಸಿಕಾ ಬೂತ್ ಗಳನ್ನು ತೆರೆಯಲಾಗಿದೆ. ಇದರ ಜೊತೆಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲೂ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಲಸಿಕೆ ನೀಡುವ ಕಾರ್ಯಕ್ರಮ ಜರುಗಿತು.

 ಇದಲ್ಲದೆ ಜಿಲ್ಲೆಯಲ್ಲಿ ಲಸಿಕಾ ವಂಚಿತ ಮಕ್ಕಳಿಗಾಗಿ ಜ.20ರಿಂದ 23ರವರೆಗೆ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಜ.20 ರಿಂದ 22ರವರೆಗೆ ನರ್ಸ್ ಗಳು ಹಾಗೂ 6,484 ಲಸಿಕಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲಿದ್ದಾರೆ.

 ಕಾರ್ಯಕ್ರಮದ ಯಶಸ್ವಿಯಾಗಿ 338 ಮೇಲ್ವಿಚಾರಕರು ಹಾಗೂ 6,608 ವ್ಯಾಕ್ಸಿನೇಟರ್ಗಳನ್ನು ನಿಯೋಜಿಸಲಾಗಿತ್ತು. ಅಲ್ಲದೆ ಮೈಸೂರು ಜಿಲ್ಲೆಯಲ್ಲಿ 742 ಪ್ರದೇಶ ಗಳನ್ನು ಹೈರಿಸ್ಕ್ ಏರಿಯಾ ಎಂದು ಗುರುತಿಸಿದ್ದು, ಈ ಪ್ರದೇಶಗಳಲ್ಲಿ 72,774 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮಾಹಿತಿ ನೀಡಿದರು.

 

%d bloggers like this: