You cannot copy content of this page.
. . .

ರೈತನ ಮೇಲೆ ಕಾಡಾನೆ ದಾಳಿ

ಡೈರಿಗೆ ಹಾಲು ಹಾಕಲು ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ಹಠಾತ್ ದಾಳಿ ನಡೆಸಿದೆ. ಸರಗೂರು ತಾಲ್ಲೂಕಿನ ಕಲ್ಲಂಬಾಳು ಗ್ರಾಮದಲ್ಲಿ ಘಟನೆ ನಡೆದಿದೆ.

ರಾಮಯ್ಯ ಎಂಬುವರೇ (68) ಕಾಡಾನೆ ದಾಳಿಗೆ ಒಳಗಾದವರು. ಆನೆ ದಾಳಿಯಿಂದ ರಾಮಯ್ಯಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಂದಿನಂತೆ ಹಾಲಿನ ಡೈರಿಗೆ ಹಾಲು ಹಾಕಲು ರಾಮಯ್ಯ ತೆರಳುತ್ತಿದ್ದಾಗ, ಹಠಾತ್‍ ಎದುರಾದ ಕಾಡಾನೆಯೊಂದು ಅವರ ಮೇಲೆ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಅವರು ಕೂಗಾಡಿದ್ದಾರೆ. ಹತ್ತಿರದಲ್ಲೇ ಇದ್ದ ಜನರು ಕೂಗಾಟ ಕೇಳಿ ಸ್ಥಳಕ್ಕೆ ಓಡಿಬಂದಿದ್ದಾರೆ. ಜನರ ಕೂಗಾಟ ಕೇಳಿ ಆನೆ ಹೆದರಿ ಓಡಿ ಹೋಗಿದೆ.  

ಗಾಯಗೊಂಡ ರಾಮಯ್ಯ ಅವರನ್ನು ಎಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಲ್ಲಂಬಾಳು ಗ್ರಾಮದ ಹೊರವಲಯದ ಜಮೀನಿನಲ್ಲಿ ಕಾಡಾನೆಗಳು ಬೀಡು ಬಿಟ್ಟಿವೆ. ಇದರಿಂದ ಜನರು ಭಯಭೀತರಾಗಿ ನಿತ್ಯ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆ ದಾಳಿ ಸುದ್ದಿ ತಿಳಿದರೂ ಘಟನಾ ಸ್ಥಳಕ್ಕೆ ಆಗಮಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

%d bloggers like this: