You cannot copy content of this page.
. . .

Month: December 2019

ಪವರ್ ಗ್ರಿಡ್‍ ವಿಚಾರ; ಎರಡನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

  ಪವರ್‍ ಗ್ರಿಡ್ ಮಾರ್ಗ ಬದಲಾವಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಯುತ್ತಿರುವ ರೈತರ ಪ್ರತಿಬಟನೆ ಎರಡನೇ ದಿನವೂ ಮುಂದುವರೆದಿದೆ.   ಪವರ್ ಗ್ರೀಡ್ ಮಾರ್ಗ್ ಬದಲಿಸಿ ಇಲ್ಲವೇ ರೈತರಿಗೆ ವಿಷ ಕುಡಿಸಿ ಎಂದು ರೈತರು ಘೋಷಣೆ ಕೂಗುತ್ತಿದ್ದಾರೆ. ಪವರ್ ಗ್ರೀಡ್ ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಬಡಗಲ ಪುರ ನಾಗೇಂದ್ರ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆಯ ನೇತೃತ್ವ ವಹಿಸಿವೆ. […]

2019ರ ವರ್ಷದ ಕೊನೆಯ ದಿನ; ಮೃಗಾಲಯಕ್ಕೆ ಹೆಚ್ಚಿದ ಪ್ರವಾಸಿಗರ ಸಂಖ್ಯೆ

 ಮೈಸೂರು: 2019ರ ವರ್ಷದ ಕೊನೆ ದಿನದ ಅಂಗವಾಗಿ ಮೃಗಾಲಯ ಆಡಳಿತ ಮಂಡಳಿ ವಾರದ ರಜೆ ತೆರವುಗೊಳಿಸಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಇಂದು (ಮಂಗಳವಾರ) ಪ್ರವಾಸಿಗರ ಸಂಖ್ಯೆ ಹೆಚ್ಚಿತ್ತು.  ವಾರದ ಪ್ರತಿ ಮಂಗಳವಾರ ಮೃಗಾಲಯಕ್ಕೆ ರಜೆ ಇರುತ್ತಿತ್ತು. ವರ್ಷದ ಕೊನೆಯ ದಿನ ಹಾಗೂ ಹೊಸ ವರ್ಷದ ಹಿನ್ನೆಲೆ ಪ್ರವಾಸಿಗರಿಗೆ ರಜಾ ದಿನವೂ ಮೃಗಾಲಯ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿದೆ. ವರ್ಷಾಂತ್ಯ ಮತ್ತು ಹೊಸ ವರ್ಷಚಾರಣೆ ಸಂಭ್ರಮ ಹಿನ್ನೆಲೆಯಲ್ಲಿ ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ನಾನಾ ಮೂಲೆಯಿಂದ ಪ್ರವಾಸಿಗರು ಆಗಮಿಸಿತ್ತಿದ್ದಾರೆ.

ರಂಗಾಯಣ ನಿರ್ದೇಶಕರಾಗಿ ಅಡ್ಡಂಡ ಕಾರ್ಯಪ್ಪ ಅಧಿಕಾರ ಸ್ವೀಕಾರ

  ರಂಗಾಯಣ ಇರೋದೆ ರಂಗಭೂಮಿ ಕಟ್ಟೋದಕ್ಕೆ. ಇದು ಕೇವಲ ಒಂದು ಭಾಷೆಗೆ ಸೀಮಿತವಾಗಿಲ್ಲ ಎಂದು ಮೈಸೂರು ರಂಗಾಯಣದ ನಿರ್ದೇಶಕ, ಕೊಡಗಿನ ರಂಗಕರ್ಮಿ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದರು.   ಅವರಿಂದು ಮೈಸೂರು ರಂಗಾಯಣಕ್ಕೆ ಆಗಮಿಸಿ, ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು, ಮೈಸೂರು ರಂಗಾಯಣದ ನೂತನ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರನ್ನು ಹೂ ಗುಚ್ಛ ನೀಡುವ ಮೂಲಕ ರಂಗಾಯಣದ ಜಂಟಿ ನಿರ್ದೇಶಕ ವಿ.ಮಲ್ಲಿಕಾರ್ಜುನ ಸ್ವಾಮಿ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಾ.ಬಿ.ವಿ.ಕಾರಂತರಂತಹ ಅಂತರರಾಷ್ಟ್ರೀಯ ಮಟ್ಟದ ರಂಗಭೀಷ್ಮ ಕಟ್ಟಿದ […]

ಜಿಪಂ ಅಧ್ಯಕ್ಷೆ ಸ್ಥಾನಕ್ಕೆ ಶಿವಮ್ಮ ರಾಜೀನಾಮೆ

 ಚಾಮರಾಜನಗರ: ಪಕ್ಷದಲ್ಲಿ ನಡೆದಿರುವ ಆಂತರಿಕ ಒಪ್ಪಂದಂತೆ ಚಾಮರಾಜನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಅವರು  ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಅತೀಕ್‌ ಕುಮಾರ್‌ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.  ಶಿವಮ್ಮ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ತೆರಕಣಾಂಬಿ ಕ್ಷೇತ್ರದ ಕಾಂಗ್ರೆಸ್‌ ಸದಸ್ಯೆ ಅಶ್ವಿನಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. 23 ಸದಸ್ಯ ಬಲದ ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್‌ 14 ಸ್ಥಾನಗಳನ್ನು ಹೊಂದಿದ್ದರೆ, ಬಿಜೆಪಿ ಒಂಬತ್ತು ಸ್ಥಾನಗಳನ್ನು ಹೊಂದಿದೆ.

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಸ್ಥಳ ಗುರುತು

  ಇತ್ತೀಚೆಗೆ ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಪ್ರಕಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸಾಧ್ಯವಾಗಲಿರುವ ಐದು ಸ್ಥಳಗಳನ್ನು ಉತ್ತರಪ್ರದೇಶ ಸರ್ಕಾರ ಗುರುತಿಸಿದೆ.   ಮಸೀದಿ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಐದು ಎಕರೆ ಸ್ಥಳ ನೀಡಬೇಕೆಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರ್ಕಾರ ಮಿರ್ಜಾಪುರ್, ಶಂಶುದ್ದೀನ್ ಪುರ್ ಮತ್ತು ಚಾಂದ್ ಪುರ್ ನಲ್ಲಿ ಐದು ಸ್ಥಳಗಳನ್ನು ಗುರುತಿಸಿದೆ.   ಸುನ್ನಿ ವಕ್ಫ್ ಬೋರ್ಡ್ ಟ್ರಸ್ಟಿಗಳು ಈ ಸ್ಥಳವನ್ನು ಪರಿಶೀಲಿಸಿ ಮಸೀದಿ ನಿರ್ಮಾಣಕ್ಕೆ ಯಾವ […]

ಶೋಕಾಚರಣೆ ಹಿನ್ನೆಲೆ: ಅರಮನೆಯಲ್ಲಿ ಸಂಭ್ರಮಾಚರಣೆಗೆ ಬ್ರೇಕ್

  ಪೇಜಾವರ ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 3 ದಿನಗಳ ಶೋಕಾಚರಣೆ ಮಾಡಲಾಗುತ್ತಿದೆ. ಈ ಕಾರಣದಿಂದಾಗಿ ಈ ಬಾರಿ ಮೈಸೂರು ಅರಮನೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್‍ ಹಾಕಲಾಗಿದೆ.   ಪ್ರತಿ ವರ್ಷ ಡಿಸೆಂಬರ್‍ 31ರ ಮಧ್ಯರಾತ್ರಿ ಅರಮನೆ ಆವರಣದಲ್ಲಿ ಬಾಣಬಿರುಸು ಪ್ರದರ್ಶನ ನಡೆಯುತ್ತಿತ್ತು. ಆದರೆ ಈ ಬಾರಿ ಈ ಸಂಭ್ರಮಾಚರಣೆಯನ್ನು ರದ್ದು ಮಾಡಲಾಗಿದೆ. ಶೋಕಾಚರಣೆ ಹಿನ್ನೆಲೆಯಲ್ಲಿ ಈ ಬಾರಿ ಬಾಣಬಿರುಸುಗಳ ಪ್ರದರ್ಶನದ ಮೂಲಕ ನಡೆಯುತ್ತಿದ್ದ ಸಂಭ್ರಮಾಚರಣೆ ಇರುವುದಿಲ್ಲ. ಜೊತೆಗೆ ಇಂದು ದೀಪಾಲಂಕಾರದ ವ್ಯವಸ್ಥೆಯೂ ಇರುವುದಿಲ್ಲ ಎಂದು […]

ಹೊಸ ವರ್ಷಾಚರಣೆ; ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ

 ಮೈಸೂರು: ಚಾಮುಂಡಿಬೆಟ್ಟದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧ ಹೇರಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕೆ.ಟಿ.ಬಾಲಕೃಷ್ಣ ತಿಳಿಸಿದ್ದಾರೆ.  ಡಿ.31ರ ಸಂಜೆ 7ಗಂಟೆಯಿಂದ ಜ.1ರ ಬೆಳಿಗ್ಗೆ 6ಗಂಟೆಯವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಉತ್ತನಹಳ್ಳಿ ಗೇಟ್, ದೈವಿವನ ಗೇಟ್, ಲಲಿತಮಹಲ್ ಗೇಟ್ ಹಾಗೂ ಚಾಮುಂಡಿಬೆಟ್ಟದ ಪಾದದ ಬಳಿ ಇರುವ ಗೇಟ್‌ಗಳಲ್ಲಿ ಪ್ರವೇಶ ಇರುವುದಿಲ್ಲ. ತಾವರೆಕಟ್ಟೆ ಗೇಟ್‌ನಲ್ಲಿ ಚಾಮುಂಡಿಬೆಟ್ಟದ ನಿವಾಸಿಗಳಿಗಷ್ಟೇ ಪ್ರವೇಶಕ್ಕೆ ಅವಕಾಶ ಇರಲಿದೆ. ಬೆಟ್ಟ ಮತ್ತು ತಪ್ಪಲಿನಲ್ಲಿ ಸಂಭ್ರಮಾಚರಣೆ ಮಾಡುವಂತಿಲ್ಲ.  ನಗರದ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್‍ ಮೊದಲಾದ ಕಡೆ ಮಧ್ಯರಾತ್ರಿ […]

ಗುಜರಾತ್‍ ಕಾಂಡ್ಲಾ ಬಂದರು ಸಮೀಪ ರಾಸಾಯನಿಕ ತೊಟ್ಟಿ ಸ್ಫೋಟ; ಒಂದು ಸಾವು

 ಗುಜರಾತ್‍ನ ಕಾಂಡ್ಲಾ ಬಂದರು ಹಾಗೂ ಭಾರತೀಯ ತೈಲ ಸಂಸ್ಕರಣಾಗಾರ ಬಳಿಯ ರಾಸಾಯನಿಕ ತೊಟ್ಟಿ ಸೋಮವಾರ ಸ್ಫೋಟಗೊಂಡಿದೆ. ಸ್ಫೋಟದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಾವೇರಿ ತೀರದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್

  2020 ನೂತನ ವರ್ಷಾಚರಣೆ ಹಿನ್ನೆಲೆಯಲ್ಲಿ ಕೆಆರ್‍ಎಸ್‍ ಪೊಲೀಸ್‌ ಠಾಣೆ ವ್ಯಾಪ್ತಿಯ ಬಲಮುರಿ, ಎಡಮುರಿ ಹಾಗೂ ಕಾವೇರಿ ನದಿ ತೀರದ ಪ್ರದೇಶ ಸುತ್ತಮುತ್ತ ಡಿ.31 ಬೆಳಗ್ಗೆ 6 ರಿಂದ ಜ.1 ಸಂಜೆ 6 ರ ವರೆಗೆ ಜನರ ಪ್ರವೇಶ, ಹೊಸ ವರ್ಷಾಚರಣೆ ನಿಷೇಧಿಸಲಾಗಿದೆ.   ಈ ಬಗ್ಗೆ ಹೇಳಿಕೆ ನೀಡಿರುವ ಶ್ರೀರಂಗಪಟ್ಟಣ ತಹಸೀಲ್ದಾರ್‍ ಎಂ.ವಿ. ರೂಪಾ, ಮೋಜು ಮಸ್ತಿ ನೆಪದಲ್ಲಿ ಪ್ರಾಣಹಾನಿ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತವೆ. ಇವನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು […]

ಕೆಪಿಎಸ್‍ಸಿ ಎ, ಬಿ ದರ್ಜೆ ಹುದ್ದೆಗಳಿಗಿಲ್ಲ ಸಂದರ್ಶನ; ಸಂಪುಟ ಸಭೆಯಲ್ಲಿ ತೀರ್ಮಾನ

 ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‍ಸಿ) ಎ ಮತ್ತು ಬಿ ದರ್ಜೆ ಹುದ್ದೆಗಳಿಗೆ ಸಂದರ್ಶನ ನಡೆಸದೇ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.  ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ, ವೈದ್ಯ, ಎಂಜಿನಿಯರ್‍ ನಂತಹ ಹುದ್ದೆಗಳಿಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ. ಅಂಗಡಿ ಮತ್ತು ವಾಣಿಜ್ಯ ಕೇಂದ್ರಗಳಲ್ಲಿ ರಾತ್ರಿ ಪಾಳಿಯಲ್ಲಿ ಮಹಿಳೆಯರು ಕಾರ್ಯ ನಿರ್ವಹಿಸಲು ಅನುಮತಿ ನೀಡುವ ಉದ್ದೇಶದಿಂದ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ಮಹಿಳೆಯರಿಗೆ ರಕ್ಷಣೆ ಕೊಡುವ […]