You cannot copy content of this page.
. . .

Day: January 18, 2020

ಕೆರೆಯಲ್ಲಿ ಮುಳುಗಿ ಬಾಲಕ ಸಾವು

 ಹನಗೋಡು: ಸಂಕ್ರಾಂತಿ ಹಬ್ಬಕ್ಕೆ ಅಜ್ಜಿ ಮನೆಗೆ ಬಂದಿದ್ದ ಬಾಲಕನೊಬ್ಬ ಸ್ನೇಹಿತರೊಂದಿಗೆ ಕೆರೆಯಲ್ಲಿ ಆಟವಾಡಲು ತೆರಳಿದ್ದ ವೇಳೆ ಹಳ್ಳದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಹೆಮ್ಮಿಗೆ ಕಾಲೋನಿಯಲ್ಲಿ ನಡೆದಿದೆ.  ಹನಗೋಡು ಹೋಬಳಿಯ ಪಂಚವಳ್ಳಿ ಗ್ರಾಮದ ಪರಮೇಶ್-ರೇಷ್ಮಾ ದಂಪತಿ ಪುತ್ರ, ಪಂಚವಳ್ಳಿ ಶಾಲೆಯ ೩ನೇ ತರಗತಿ ವಿದ್ಯಾರ್ಥಿ ಅಖಿಲ್(೯) ಸಾವನ್ನಪ್ಪಿದ ಬಾಲಕ.  ಅಖಿಲ್ ಸಂಕ್ರಾಂತಿ ಹಬ್ಬಕ್ಕೆ ಅಜ್ಜಿ ಮನೆಗೆ ಬಂದಿದ್ದ. ಶನಿವಾರ ಮದ್ಯಾಹ್ನ ಗ್ರಾಮದ ಹುಡುಗರೊಂದಿಗೆ ಪಕ್ಕದ ಕೆರೆಯಲ್ಲಿ ಆಟವಾಡಲು ತೆರಳಿದ್ದ. ಕೆರೆಯಲ್ಲಿ ನೀರು ತುಂಬಿದ್ದರಿಂದ ಆಳ […]

ಗಂಡ ಹೆಂಡಿರ ಜಗಳ ಪತ್ನಿಯ ಸಾವಿನಲ್ಲಿ ಅಂತ್ಯ

 ಮೈಸೂರು: ಗಂಡ ಹೆಂಡಿರ ಜಗಳ ಪತ್ನಿಯ ಸಾವಿನಲ್ಲಿ ಅಂತ್ಯ ಕಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.  ನಗರದ ಇಲವಾಲದ ಮಾದಹಳ್ಳಿಯಲ್ಲಿ ಘಟನೆ ನಡೆದಿದ್ದು, ಸುನಿತಾ (೩೮) ಸಾವನ್ನಪ್ಪಿದ ದುರ್ದೈವಿ. ಘಟನೆ ಬಳಿಕ ಆಕೆಯ ಪತಿ ಶ್ರೀನಿವಾಸ್‍ ನಾಪತ್ತೆಯಾಗಿದ್ದಾರೆ. 17 ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಈ ದಂಪತಿ, ಸ್ವಂತ ಜಮೀನಿನಲ್ಲಿ ಮನೆ ಮಾಡಿಕೊಂಡಿದ್ದ ಜೀವನ ನಡೆಸುತ್ತಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರತಿದಿನದಂತೆ ನಿನ್ನೆಯೂ (ಶುಕ್ರವಾರ) ಇಬ್ಬರ ನಡುವೆ ಜಗಳವಾಗಿದೆ.  ಆಟವಾಡುತ್ತಿದ್ದ ಮಕ್ಕಳು ಮನೆಗೆ ವಾಪಸ್ ಬಂದಾಗ ಬಾಗಿಲಿನಲ್ಲೇ […]

ಸಿಎಎ ವಿರೋಧಿಸುವವರು ದಲಿತ ವಿರೋಧಿಗಳು; ಅಮಿತ್‍ ಶಾ

 ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸುವವರನ್ನು ನಾನು ಕೇಳುವ ಪ್ರಶ್ನೆಯೆಂದರೆ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದ ದಲಿತರ ವಿರುದ್ಧ ಹೋಗುವುದರಿಂದ ನೀವು ಏನು ಗಳಿಸುವಿರಿ? ಸಿಎಎಯನ್ನು ವಿರೋಧಿಸುವವರು ದಲಿತ ವಿರೋಧಿಗಳು ಎಂದು ಕೇಂದ್ರ ಗೃಹ ಮಂತ್ರಿ ಅಮಿತ್‍ ಶಾ ಹೇಳಿದರು.  ಹುಬ್ಬಳ್ಳಿಯಲ್ಲಿ ಶನಿವಾರ ಆಯೋಜಿಸಿದ್ದ ಸಿಎಎ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತದ ನೆರೆ ರಾಷ್ಟ್ರಗಳಿಂದ ದೌರ್ಜನ್ಯಕ್ಕೆ ಒಳಗಾಗಿ ತಪ್ಪಿಸಿಕೊಂಡು ಬರುವ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಪೌರತ್ವ ನೀಡಲು ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಆದರೆ, ವೋಟ್‍ ಬ್ಯಾಂಕ್‍ಗಾಗಿ […]

ಎಬಿವಿಪಿಯದ್ದು ರಕ್ತ ಹರಿಸುವ ಸಂಸ್ಕೃತಿಯಲ್ಲ; ಡಾ.ಬಿ.ವಿ.ವಸಂತಕುಮಾರ್

 ಮೈಸೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ಗೆ (ಎಬಿವಿಪಿ) ರಕ್ತ ಹರಿಸುವ ಸಂಸ್ಕೃತಿ ಇಲ್ಲ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ್ ಹೇಳಿದರು.  ಎಬಿವಿಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ಒಯು) ಸಹಯೋಗದಲ್ಲಿ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಶನಿವಾರ ಚಾಲನೆ ನೀಡಲಾದ ‘ರಾಷ್ಟ್ರ ಪುನರ್ ನಿರ್ಮಾಣಕ್ಕಾಗಿ ವಿದ್ಯಾರ್ಥಿ ಸಂಸ್ಕೃತಿ ಚಳವಳಿ-೨’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  ಜೆಎನ್‍ಯುನಲ್ಲಿ ಇರುವವರಿಗೆ ಹೇಳುತ್ತೇವೆ: ರಕ್ತ ಹರಿಸುವ ಸಂಸ್ಕೃತಿ ವಿದ್ಯಾರ್ಥಿ ಪರಿಷತ್‌ದ್ದಲ್ಲ. ಅಗತ್ಯ ಇರುವವರಿಗೆ, ರೋಗಿಗಳಿಗೆ ರಕ್ತ […]

ಶಬರಿಮಲೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ವಾಹನ ಪಲ್ಟಿ…

 ಚಾಮರಾಜನಗರ: ಶಬರಿಮಲೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಟೆಂಪೋ ಟ್ರಾವೆಲರ್​ವೊಂದು ಪಲ್ಟಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಪುರದ ಬಳಿ ನಡೆದಿದೆ. ಯಾತ್ರಾರ್ಥಿಗಳು ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ.  ಯಾತ್ರಾರ್ಥಿಗಳಿದ್ದ ಟೆಂಪೊ ಗುಂಡ್ಲುಪೇಟೆಯ ರಾಘವಾಪುರದ ಬಳಿ ತೆರಳುತ್ತಿತ್ತು. ಈ ವೇಳೆ ಮುಂದೆ ಸಾಗುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಟೆಂಪೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರಿನ ಮಾಗಡಿಯಿಂದ ಶಬರಿಮಲೆಗೆ 11 ಮಂದಿ ಮಾಲಾಧಾರಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.  ಅದೃಷ್ಟವಶಾತ್ ಯಾತ್ರಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ವಾಹನ ಪಲ್ಟಿಯಾಗಿದ್ದರಿಂದ ಅಪಶಕುನವೆಂದು […]

ಮಗನಿಂದಲೇ ತಂದೆ ಹತ್ಯೆ

 ಮದ್ಯಸೇವನೆಗೆ ಹಣ ನೀಡದ್ದಕ್ಕೆ ಕೋಪಗೊಂಡು ತಂದೆಯನ್ನೇ ಹತ್ಯೆ ಮಾಡಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.  ಸೋಮವಾರಪೇಟೆಯ ಗೋಣಿಮರೂರಿನಲ್ಲಿ ಈ ಘಟನೆ ನಡೆದಿದೆ. ಜೇನುಕುರುಬರ ಕರಿಯಪ್ಪ (46) ಹತ್ಯೆಯಾದ ದುರ್ದೈವಿ. ಮಗ ಲೋಕೇಶ್ ಎಂಬಾತನಿಂದ ಕುಕೃತ್ಯ ಆಗಿದೆ. ಲೋಕೇಶ್‍ ಮದ್ಯ ಸೇವನೆಗೆ ತಂದೆ ಬಳಿ ಹಣ ಕೇಳಿದ್ದಾನೆ. ತಂದೆ ಹಣ ನೀಡದ್ದಕ್ಕೆ ಕೋಪಗೊಂಡು ಕೊಲೆ ಮಾಡಿದ್ದಾನೆ. ತಾಯಿ ಲೀಲಾ ಮೇಲೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಗೋ ಬ್ಯಾಕ್‍ ಅಮಿತ್‍ ಶಾ’ ಎಂದ ಪ್ರತಿಭಟನಾಕಾರರು ಪೊಲೀಸರ ವಶಕ್ಕೆ

 ಸಿಎಎ ಪರವಾಗಿ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್‍ ಶಾ ಹುಬ್ಬಳ್ಳಿಗೆ ಭೇಟಿ ನೀಡುವುದನ್ನು ವಿರೋಧಿಸಿ ಸಂವಿಧಾನ ರಕ್ಷಣಾ ಸಮಿತಿ ಪ್ರತಿಭಟನೆ ನಡೆಯಿತು. ಪೊಲೀಸರ ಅನುಮತಿ ನಿರಾಕರಣೆಯ ನಡುವೆಯೂ ‘ಗೋ ಬ್ಯಾಕ್ ಅಮಿತ್ ಶಾ’ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಲು ಮುಂದಾದ ಸಮಿತಿಯ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು.  ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ಬಳಿ ನೆರೆದಿದ್ದ ಪ್ರತಿಭಟನಾಕಾರರನ್ನು ತಡೆದು ಪೊಲೀಸರು ಪ್ರತಿಭಟನೆ ನಡೆಸದಂತೆ ಮನವಿ ಮಾಡಿದರು. ಇದನ್ನು ಲೆಕ್ಕಿಸದೇ ಪ್ರತಿಭಟನೆಗೆ ಮುಂದಾದವರನ್ನು ವಶಕ್ಕೆ ಪಡೆದು ಬಸ್‍ನಲ್ಲಿ […]

ವಿಚಾರಣೆಗೆ ಹಾಜರಾಗುವಂತೆ ನಟಿ ರಶ್ಮಿಕಾ ಮಂದಣ್ಣ, ಕುಟುಂಬಸ್ಥರಿಗೆ ಐ.ಟಿ ನೋಟಿಸ್

 ದಕ್ಷಿಣ ಭಾರತ ಚಿತ್ರರಂಗದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹಾಗೂ ಕುಟುಂಬಸ್ಥರಿಗೆ ಐ.ಟಿ ಸಮನ್ಸ್‍ ನೀಡಿದೆ. ಸೋಮವಾರ ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಮೈಸೂರಿನ ಐಟಿ ಕಚೇರಿಗೆ ಹಾಜರಾಗುವಂತೆ ರಶ್ಮಿಕಾ ಮತ್ತು ಕುಟುಂಬಸ್ಥರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.  ಐಟಿ ಅಧಿಕಾರಿಗಳು ರಶ್ಮಿಕಾ ಮನೆಯಲ್ಲಿ ಸತತ ಎರಡು ದಿನಗಳ ಕಾಲ ದಾಳಿ ನಡೆಸಿ ಸಾಕಷ್ಟು ಮಾಹಿತಿ ಕಲೆ ಹಾಕಿದ್ದರು. ಜೊತೆಗೆ ದಾಖಲೆ ಇಲ್ಲದ 25 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತೆರಿಗೆ ವಂಚನೆ ಮಾಡಿರುವ ಕೋಟ್ಯಂತರ ಆಸ್ತಿಯ […]

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೇ ಕನ್ನ ಹಾಕಿದ ಕಳ್ಳರು

 ಮೈಸೂರು ಜಿಲ್ಲೆಯ ತಿ.ನರಸೀಪುರದ ಕುಪ್ಯ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ತಡರಾತ್ರಿ ಕಳ್ಳತನವಾಗಿದೆ. ತಡರಾತ್ರಿ ಆರೋಗ್ಯ ಕೇಂದ್ರದಲ್ಲಿ ಬೀಗ ಮುರಿದ ಕಳ್ಳರು ಬೆಲೆಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.  ಸುಮಾರು ಒಂದು ಲಕ್ಷ ಮೌಲ್ಯದ ಕಂಪ್ಯೂಟರ್, ups, ಟಿ.ವಿ., ಜೆರಾಕ್ಸ್ ಮೆಷಿನ್, ಪ್ರಿಂಟರ್ ಕಳ್ಳತನವಾಗಿದೆ. ತಿ.ನರಸೀಪುರ ಪೊಲೀಸ್‍ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ನಗರಪಾಲಿಕೆ; ಮೊದಲ ಮುಸ್ಲಿಂ ಮಹಿಳಾ ಮೇಯರ್ ಆಗಿ ಜೆಡಿಎಸ್ ನ ತಸ್ನೀಂ ಆಯ್ಕೆ

 ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‍-ಜೆಡಿಎಸ್‍ ಮೈತ್ರಿ ಮುಂದುವರಿದಿದ್ದು, ಒಪ್ಪಂದದಂತೆ ಜೆಡಿಎಸ್‍ನ ತಸ್ನೀಂ ಮೇಯರ್ ಹಾಗೂ ಕಾಂಗ್ರೆಸ್‍ನ ಸಿ.ಶ್ರೀಧರ್ ಉಪಮೇಯರ್ ಆಗಿ ಆಯ್ಕೆಯಾದರು. ತಸ್ನೀಂ 33ನೇ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಮುಸ್ಲಿಂ ಸಮುದಾಯದ ಮೊದಲ ಮಹಿಳಾ ಮೇಯರ್ ಎನಿಸಿಕೊಂಡಿದ್ದಾರೆ.   ಶನಿವಾರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ 26ನೇ ವಾರ್ಡ್‍ನ ತಸ್ನೀಂ ಅವರು 47 ಸದಸ್ಯರ ಬೆಂಬಲ ಪಡೆದರು. 65ನೇ ವಾರ್ಡ್‍ನ ಸದಸ್ಯೆ ಗೀತಾಶ್ರೀ ಯೋಗಾನಂದ್‍ ಬಿಜೆಪಿ […]