You cannot copy content of this page.
. . .

 ಚಾಮರಾಜನಗರ: ಶಬರಿಮಲೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಟೆಂಪೋ ಟ್ರಾವೆಲರ್ವೊಂದು ಪಲ್ಟಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಪುರದ ಬಳಿ ನಡೆದಿದೆ. ಯಾತ್ರಾರ್ಥಿಗಳು ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ.

 ಯಾತ್ರಾರ್ಥಿಗಳಿದ್ದ ಟೆಂಪೊ ಗುಂಡ್ಲುಪೇಟೆಯ ರಾಘವಾಪುರದ ಬಳಿ ತೆರಳುತ್ತಿತ್ತು. ಈ ವೇಳೆ ಮುಂದೆ ಸಾಗುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಟೆಂಪೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರಿನ ಮಾಗಡಿಯಿಂದ ಶಬರಿಮಲೆಗೆ 11 ಮಂದಿ ಮಾಲಾಧಾರಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

 ಅದೃಷ್ಟವಶಾತ್ ಯಾತ್ರಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ವಾಹನ ಪಲ್ಟಿಯಾಗಿದ್ದರಿಂದ ಅಪಶಕುನವೆಂದು ಭಾವಿಸಿ ಶಬರಿಮಲೆ ಯಾತ್ರೆ ಮೊಟಕುಗೊಳಿಸಿ ನಂಜನಗೂಡಿನ ಅಯ್ಯಪ್ಪಸ್ವಾಮಿ ದೇಗುಲಕ್ಕೆ ತೆರಳಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

%d bloggers like this: