You cannot copy content of this page.
. . .

ಫ್ರೀಡಂ ಪಾರ್ಕ್ ‘ಗುಲಾಬಿ’ಮಯ; ‘ಆಶಾ’ಭಾವನೆ ಮೂಡಿಸಿದ ರಾಮುಲು..

    ಹಲವು ವರ್ಷಗಳಿಂದ ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರು ಮತ್ತೆ ಬೀದಿಗಿಳಿದಿದ್ದಾರೆ. ಬೆಂಗಳೂರು ರೈಲ್ವೆ ನಿಲ್ದಾಣದಿಂದ ಮೆರವಣಿಗೆ ನಡೆಸಿದ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಸಾವಿರಾರು ಆಶಾ ಕಾರ್ಯಕರ್ತೆಯರು, ಫ್ರೀಡಂ ಪಾರ್ಕ್‍ ನಲ್ಲಿ ಧರಣಿ ಕುಳಿತಿದ್ದಾರೆ. ಆಶಾ ಕಾರ್ಯಕರ್ತೆಯರು 10 ಬೇಡಿಕೆಗಳನ್ನು ಮುಂದಿಟ್ಟಿದ್ದು, ಇದರಲ್ಲಿ 7 ಬೇಡಿಕೆ ಈಡೇರಿಸಲು ಸರ್ಕಾರ ಭರವಸೆ ನೀಡಿದೆ. ಇದರಿಂದ ಆಶಾ ಕಾರ್ಯಕರ್ತೆಯರಲ್ಲಿ ಆಶಾಭಾವನೆ ಮೂಡಿದೆ.

  ಆಶಾ ಕಾರ್ಯಕರ್ತೆಯರ 10 ಬೇಡಿಕೆಗಳಲ್ಲಿ 7 ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರು ತುಂಬ ಕಷ್ಟಪಟ್ಟಿದ್ದಾರೆ. ಅವರ ಜೊತೆ ನಾನು ಚರ್ಚಿಸಿದ್ದೇನೆ. ಕೇಂದ್ರ ಮತ್ತು ರಾಜ್ಯದ ವೇತನವನ್ನು ಒಂದೇ ದಿನ ಬಿಡುಗಡೆ ಮಾಡಲು ಸಮ್ಮತಿ ನೀಡಿದ್ದೇನೆ. ಪ್ರತಿ ತಿಂಗಳು 10ನೇ ತಾರೀಕಿನೊಳಗೆ ವೇತನ ನೀಡಲಾಗುವುದು. ದಯವಿಟ್ಟು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯನ್ನು ಕೈಬಿಡಬೇಕು ಎಂದು ಶ್ರೀರಾಮುಲು ಮನವಿ ಮಾಡಿದ್ದಾರೆ.

 12 ಸಾವಿರ ರೂ. ಮಾಸಿಕ ವೇತನ ನೀಡಬೇಕು ಎಂದು ಆಗ್ರಹ ಮಾಡಲಾಗಿತ್ತು. ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ. ವೇತನ ನೀಡಲು ನಾನು ಬದ್ಧನಾಗಿದ್ದೇನೆ. ನಾನೆಷ್ಟು ದಿನ ಸಚಿವನಾಗಿರ್ತೀನೋ ಗೊತ್ತಿಲ್ಲ. ಆದರೆ 10 ಸಾವಿರ ವೇತನ ಕೊಡಲು ಸಿದ್ಧನಿದ್ದೇನೆ. ಈ ಬಗ್ಗೆ ಸಿಎಂ ಜೊತೆ ನಾನು ಚರ್ಚಿಸುತ್ತೇನೆ ಎಂದು ಶ್ರೀರಾಮುಲು ಹೇಳಿದ್ದಾರೆ.

 ಆಶಾ ಕಾರ್ಯಕರ್ತೆಯರ ಬೇಡಿಕೆಗಳೇನು?:
1. ಕೇಂದ್ರ ಮತ್ತು ರಾಜ್ಯ ಸೇರಿ ಮಾಸಿಕ 12,000 ರೂ. ನೀಡಬೇಕು

2. ಆಶಾ ಸಾಫ್ಟ್ ಅಥವಾ ಆರ್​ಸಿಎಚ್ ಪೋರ್ಟಲ್ ಜೋಡಣೆ ರದ್ದಾಗಬೇಕು
3. ಎಂಸಿಟಿಎಸ್ ಸೇವೆಗಳ ಪ್ರೋತ್ಸಾಹಧನ ಒಂದೇ ಬಾರಿಗೆ ಪಾವತಿಸಬೇಕು
4. 15 ತಿಂಗಳ ಬಾಕಿ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು
5. ಜನಸಂಖ್ಯೆಗೆ ತಕ್ಕಂತೆ ಎಂಸಿಟಿಎಸ್ ಪ್ರೋತ್ಸಾಹಧನ ಹೆಚ್ಚಿಸಬೇಕು
5. ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು
6. ಮಾರಣಾಂತಿಕ ಕಾಯಿಲೆ / ಮರಣ ಹೊಂದಿದರೆ ನೆರವು ನೀಡಬೇಕು
7. ವಿವಿಧ ಸರ್ವೆಗಳ ಬಾಕಿ ಪ್ರೋತ್ಸಾಹಧನ ಕೂಡಲೇ ಪಾವತಿಸಬೇಕು
8. ಜಿಲ್ಲಾ ಮತ್ತು ತಾಲೂಕು ಕೇಂದ್ರದ ಸಭೆಗಳಿಗೆ ದಿನಭತ್ಯೆ ಹೆಚ್ಚಿಸಬೇಕು
9. ದಿನಕ್ಕೆ 300 ರೂ. ನಿಗದಿಪಡಿಸಿ, ಅಂದೇ ಪಾವತಿಸಬೇಕು
10. ಆಶಾ ಸುಗಮಗಾರರನ್ನು ನೇಮಿಸಿ, ಮಾಸಿಕ 12,000 ರೂ. ಜೊತೆಗೆ ಟಿಎ ನೀಡಬೇಕು 

%d bloggers like this: