You cannot copy content of this page.
. . .

ಪ್ರೀತಿ ನಿರಾಕರಿಸಿದ ಯುವತಿಗೆ ರೇಜರ್ ನಿಂದ ಇರಿತ

  ಪ್ರೀತಿಸಲು ನಿರಾಕರಿಸಿದ ಯುವತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಯುವಕನನ್ನು ವಿ.ವಿ.ಪುರಂ ಪೋಲಿಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
    ಪಿರಿಯಾಪಟ್ಟಣದ ಮಂಚೇಗೌಡನ ಕೊಪ್ಪಲಿನ ನಿವಾಸಿ ಅಮೃತ್ (೨೧) ಎಂಬಾತನೇ ಬಂಧಿತ ಆರೋಪಿ. ಈತ ಪ್ರೀತಿ ಮಾಡು ಎಂದು ಹೆಬ್ಬಾಳದ ಯುವತಿಯೊಬ್ಬಳನ್ನು ಪೀಡಿಸುತ್ತಿದ್ದ. ಆದರೆ ಯುವತಿ ಅದಕ್ಕೆ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಅಮೃತ್ ತನ್ನ ಸ್ನೇಹಿತರನ್ನು ಕರೆದುಕೊಂದು ಹೋಗಿ, ರೇಜರ್‌ನಿಂದ ಹಲ್ಲೆ ಮಾಡಿಸಿದ್ದಾನೆ. ಹಲ್ಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ.
    ಹಲ್ಲೆ ಬಗ್ಗೆ ವಿಚಾರಣೆ ನಡೆಸಿದ ಪೊಲೀಸರು ಅಮೃತ್‌ನನ್ನು ಬಂಧಿಸಿದ್ದಾರೆ. ಹಲ್ಲೆ ಮಾಡಿದ ಆರೋಪಿಗಳ ಶೋಧ ಕಾರ್ಯ ನಡೆಯುತ್ತಿದೆ. ಈ ಸಂಬಂಧ ವಿ.ವಿ.ಪುರಂ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

%d bloggers like this: