You cannot copy content of this page.
. . .

  ಬೈಕ್ ಹಾಗೂ ಬಸ್ಸಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಮಡಿಕೇರಿ ಹೊರವಲಯದ ಕೊಯನಾಡು ದೇವರಕೊಲ್ಲಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಇಂದು ಬೆಳಿಗ್ಗೆ 8.30 ಗಂಟೆಗೆ ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್‌ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ನಲ್ಲಿದ್ದ ಇಬ್ಬರು ಪ್ರವಾಸಿಗರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

  ಮೃತರ ಹೆಚ್ಚಿನ ವಿವರಗಳು ಇನ್ನೂ ಲಭ್ಯವಾಗಿಲ್ಲ. ಸ್ಥಳಕ್ಕೆ ಕೊಡಗು ಎಸ್ಪಿ, ಸುಮನ್‌ ಪನ್ನೇಕರ್ ಭೇಟಿ ನೀಡಿದ್ದರು. ಮಡಿಕೇರಿ‌ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

%d bloggers like this: