You cannot copy content of this page.
. . .

Category: ಕೋರ್ಟ್ ತೀರ್ಪುಗಳು

ಪ್ರತಿಭಟನೆ ಹತ್ತಿಕ್ಕಲು ನಿಷೇಧಾಜ್ಞೆ ಜಾರಿಗೊಳಿಸಿದ್ದು ಕಾನೂನು ಬಾಹಿರ; ಹೈಕೋರ್ಟ್

 ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ಹತ್ತಿಕ್ಕಲು ಬೆಂಗಳೂರು ನಗರದಲ್ಲಿ ಡಿಸೆಂಬರ್‌ 18ರಿಂದ ಮೂರು ದಿನ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು ಕಾನೂನು ಬಾಹಿರ ಎಂದು ಹೈಕೋರ್ಟ್‌ ಗುರುವಾರ ಮಹತ್ವದ ಆದೇಶ ಹೊರಡಿಸಿದೆ.  ಕಾಂಗ್ರೆಸ್‌ ಸಂಸದ ರಾಜೀವ್‌ಗೌಡ ಮತ್ತು ಶಾಸಕಿ ಸೌಮ್ಯಾರೆಡ್ಡಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಕುರಿತು ವಾದ – ಪ್ರತಿವಾದ ಆಲಿಸಿದ ಬಳಿಕ ಸಿಜೆ ಎ.ಎಸ್‌.ಓಕಾ ಹಾಗೂ ನ್ಯಾ. ಹೇಮಂತ್‌ ಚಂದನಗೌಡರ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿತು. […]

ವೃದ್ಧೆ ಮೇಲೆ ಹಲ್ಲೆ ಮಾಡಿದವನಿಗೆ 7 ವರ್ಷ ಜೈಲು ಶಿಕ್ಷೆ

 ಮೈಸೂರು: ವೃದ್ದೆಯ ಮೇಲೆ ಹಲ್ಲೆ ಮಾಡಿ, ಚಿನ್ನದ ಸರವನ್ನು ದೋಚಿದ್ದವನಿಗೆ ಮೈಸೂರಿನ 2ನೇ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ 5 ಸಾವಿರ ದಂಡದೊಂದಿಗೆ 7 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.  ನಂಜನಗೂಡು ತಾಲ್ಲೂಕಿನ ತುಂಬುನೇರಳೆ ಗ್ರಾಮದ ಟಿ.ಎಂ.ನಾಗೇಂದ್ರ ಶಿಕ್ಷೆಗೆ ಗುರಿಯಾದ ಆರೋಪಿ. ಮೈಸೂರು ತಾಲ್ಲೂಕಿನ ಬಂಡಿಪಾಳ್ಯದ ನಿವಾಸಿ ನಂಜಮ್ಮ ಅವರ ಮೇಲೆ ಈತ ಹಲ್ಲೆ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ.  ಕಳೆದ 2018 ಜ.28ರಂದು ಬೆಳಗ್ಗೆ ನಂಜಮ್ಮ ಅವರು ಹಾಲಿನ ಬೂತ್‌ನ […]

ಎಸ್ಸಿ/ಎಸ್ಟಿ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಮಾನ್ಯತೆ ಎತ್ತಿಹಿಡಿದ ಸುಪ್ರೀಂ

 ಎಸ್ಸಿ/ಎಸ್ಟಿ (ಪರಿಶಿಷ್ಟ ಜಾತಿ, ಪಂಗಡ) ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸುವ ಅಂಶಗಳನ್ನು ತಡೆಯಲು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ 2018ರ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಮಾನ್ಯತೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.  ‘ಕಾಯ್ದೆಯ ಅಡಿಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಅರೋಪಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪ್ರಾಥಮಿಕ ತನಿಖೆ ನಡೆಸಬೇಕಾದ ಅಗತ್ಯವಿಲ್ಲ. ಹಿರಿಯ ಪೊಲೀಸ್‌ ಅಧಿಕಾರಿಯ ಅನುಮತಿಯೂ ಬೇಕಿಲ್ಲ. ಈ ಕಾಯ್ದೆಯ ಅನ್ವಯ ನಿರೀಕ್ಷಣಾ ಜಮೀನಿಗೂ ಅವಕಾಶವಿಲ್ಲ. ಆದರೆ, ಕಾಯ್ದೆಯ ಅಡಿಯಲ್ಲಿ ದಾಖಲಾಗುವ ಎಫ್‌ಐಆರ್‌ ಅನ್ನು ವಿಶೇಷ ಸಂದರ್ಭಗಳಲ್ಲಿ ರದ್ದು ಮಾಡುವ […]

ಪರೀಕ್ಷೆಯಲ್ಲಿ ಅಕ್ರಮವೆಸಗಿದ ವಿದ್ಯಾರ್ಥಿಗಳಿಗೆ ಜೈಲು ಶಿಕ್ಷೆ

 ಮೈಸೂರು: ಪರೀಕ್ಷೆ ಬರೆಯುವಾಗ ಅಕ್ರಮವೆಸಗುವ ವೇಳೆ ಸಿಕ್ಕಿ ಬಿದ್ದಿದ್ದ ಇಬ್ಬರು ವಿದ್ಯಾರ್ಥಿಗಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ 3ನೇ ಅಧಿಕ 1ನೇ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಮೂರು ವರ್ಷ ಜೈಲು ಮತ್ತು ತಲಾ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.  ಕೆ.ಆರ್.ನಗರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದ ಯೋಗೇಶ್ ಮತ್ತು ಪಿರಿಯಾಪಟ್ಟಣ ತಾಲ್ಲೂಕಿನ ಮರದೂರು ಗ್ರಾಮದ ನಿವಾಸಿ ನಂದೀಶ್ ಶಿಕ್ಷೆಗೆ ಗುರಿಯಾದವರು.  ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ 2009ರ […]

ನಿರ್ಭಯಾ ಪ್ರಕರಣ; ಅಪರಾಧಿ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

 ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಮೇಲ್ಮನವಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.  ಘಟನೆ ನಡೆದಾಗ ನಾನು ಅಪ್ರಾಪ್ತನಾಗಿದ್ದೆ. ಹೀಗಾಗಿ, ಮರಣದಂಡನೆಗೆ ಒಳಪಡಿಸದಂತೆ ಮನವಿ ಮಾಡಿದ್ದ. ಮನವಿಯನ್ನು ತ್ರಿಸದಸ್ಯ ಪೀಠ ವಜಾ ಮಾಡಿತ್ತು. ಮತ್ತೆ ಸಾಂವಿಧಾನಿಕ ಪೀಠಕ್ಕೆ ಪವನ್ ಗುಪ್ತಾ ಮನವಿ ಮಾಡಿದ್ದ. ಸುಪ್ರೀಂ ಕೋರ್ಟ್ ಮೇಲ್ಮನವಿ ವಜಾಗೊಳಿಸಿದೆ.    

ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂ; ಪರಿಹಾರಾತ್ಮಕ ಅರ್ಜಿ ವಜಾಗೊಳಿಸಿದ ಸುಪ್ರೀಂ

 ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಒಬ್ಬರಾದ ಅಕ್ಷಯ್‍ ಕುಮಾರ್ ಸಿಂಗ್ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂ ಆಗಿದೆ.  ಅಪರಾಧಿಗಳಿಗೆ ಫೆ.1ಕ್ಕೆ ಗಲ್ಲುಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿತ್ತು. 14 ದಿನಗಳಲ್ಲಿ ಕಾನೂನು ಪರಿಹಾರ ಕಂಡುಕೊಳ್ಳಬಹುದು ಎಂದೂ ಆದೇಶದಲ್ಲಿ ತಿಳಿಸಿತ್ತು. ಹೀಗಾಗಿ, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅಪರಾಧಿ ಮುಕೇಶ್‍ ಮನವಿ ಸಲ್ಲಿಸಿದ್ದರು. ರಾಷ್ಟ್ರಪತಿಗಳು ಅದನ್ನು ತಿರಸ್ಕರಿಸಿದ್ದರು. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಮುಕೇಶ್‍ ಮೊರೆ ಹೋದರೂ […]

‘ಫ್ರೀ ಕಾಶ್ಮೀರ’ ಪ್ರಕರಣ; ನಳಿನಿ, ಮರಿದೇವಯ್ಯಗೆ ನಿರೀಕ್ಷಣಾ ಜಾಮೀನು ಮಂಜೂರು

 ಮೈಸೂರು ವಿ.ವಿ.ಯ ಮಾನಸಗಂಗೋತ್ರಿ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ‘ಫ್ರೀ ಕಾಶ್ಮೀರ’ ಪ್ಲೇಕಾರ್ಡ್‍ ಪ್ರದರ್ಶನ ಪ್ರಕರಣದಲ್ಲಿ ರಾಷ್ಟ್ರದ್ರೋಹ ಆರೋಪ ಎದುರಿಸುತ್ತಿದ್ದ ಯುವತಿ ನಳಿನಿ ಹಾಗೂ ಮರಿದೇವಯ್ಯಗೆ 2ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.  ಏನೇನು ಷರತ್ತುಗಳು ಇಬ್ಬರಿಗೂ 8 ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ. 50 ಸಾವಿರ ರೂ. ಬಾಂಡ್, ಒಬ್ಬರು ಸ್ಯೂರಿಟಿ, ಒಂದು ತಿಂಗಳ ಒಳಗೆ ಪಾಸ್‍ಪೋರ್ಟ್‍ನ್ನು ಪೊಲೀಸ್ ವಶಕ್ಕೆ ನೀಡುವುದು, ತನಿಖಾಧಿಕಾರಿಗೆ ಸಹಕಾರ ನೀಡುವುದು, 15 […]

ಶಾಸಕರಿಗೆ ಚಾಟಿ ಬೀಸಿದ ಹೈಕೋರ್ಟ್

 ಶಾಸಕರು ತಮ್ಮ ಖಾಸಗಿ ಕಾರಿನ ಮೇಲೆ ಹುದ್ದೆ, ಸರ್ಕಾರಿ ಲಾಂಛನ ಹಾಕಿಕೊಳ್ಳಬಾರದೆಂದು ಎಂದು ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಿಯಮ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ವಿಧಾನಸಭೆ ಸ್ಪೀಕರ್‌ ಗೂ ಆದೇಶ ನೀಡಿದೆ.   ಆನಂದ್ ಶೆಟ್ಟಿ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ. ಖಾಸಗಿ ಕಾರುಗಳ ಮೇಲೆಯೂ ಸರ್ಕಾರಿ ಲಾಂಛನ ಅಳವಡಿಸಿರುವುದು ಕಂಡು ಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ಪೌರತ್ವ ಕಾಯ್ದೆ ತಡೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

 ವಿವಾದಾಸ್ಪದ ಪೌರತ್ವ (ತಿದ್ದುಪಡಿ) ಕಾಯ್ದೆ ತಡೆ ವಿಧಿಸಲು ಬುಧವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.  ಸುಪ್ರೀಂ ಕೋರ್ಟ್‍ ಮುಖ್ಯ ನ್ಯಾಯಮೂರ್ತಿ ಎಸ್‍.ಎ.ಬೋಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಸಂವಿಧಾನ ಪೀಠವು ಕಾಯ್ದೆ ವಿರುದ್ಧ ಸಲ್ಲಿಕೆಯಾಗಿದ್ದ 143 ಅರ್ಜಿಗಳನ್ನು ವಿಚಾರಣೆ ನಡೆಸಿತು. ಸಲ್ಲಿಕೆಯಾಗಿರುವ ಅರ್ಜಿಗಳಿಗೆ 4 ವಾರದಲ್ಲಿ ಪ್ರತಿಕ್ರಿಯೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದೆ.  ಈಗ ಸಲ್ಲಿಕೆಯಾಗಿರುವ ಅರ್ಜಿಗಳು ಬಗೆಹರಿಯದ ಹೊರತು ಸಿಎಎ ಮೇಲಿನ ಅರ್ಜಿಗಳ ವಿಚಾರಣೆ ನಡೆಸದಂತೆ ಎಲ್ಲಾ ಹೈಕೋರ್ಟ್‌ಗಳಿಗೂ ಕೋರ್ಟ್ ನಿರ್ಬಂಧ ಹೇರಿದೆ.  ಅಸ್ಸಾಂ ಮತ್ತು […]

ವಂಚನೆ ಮಾಡಿದ್ದಕ್ಕೆ 40 ಸಾವಿರ ದಂಡ, 3 ವರ್ಷ ಜೈಲು ಶಿಕ್ಷೆ

 ಮೈಸೂರು: ವಿಶ್ವಾಸ ದ್ರೋಹ ಹಾಗೂ ವಂಚನೆಯ ಪ್ರಕರಣದಲ್ಲಿ ಓರಿಯಂಟಲ್ ಬ್ಯಾಂಕ್ ಆ ಕಾಮರ್ಸ್ ಮಾಜಿ ವ್ಯವಸ್ಥಾಪಕ ವಕೀಲ ಬೆಂಕಿ ಚಿದಾನಂದ್ ಅವರಿಗೆ ಮೈಸೂರಿನ ೧ನೇ ಹೆಚ್ಚುವರಿ ಹಿರಿಯ ಸಿವಿಲ್ ಜಡ್ಜ್ ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯವು 40,000 ರೂ. ದಂಡದೊಂದಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.  ವಕೀಲನೂ ಆಗಿರುವ ಬೆಂಕಿ ಚಿದಾನಂದ ಲಷ್ಕರ್ ಮೊಹಲ್ಲಾದ ಅಕ್ಬರ್ ರಸ್ತೆಯ ನಿವಾಸಿ ಕೆ. ರಾಘು ಅವರಿಂದ 2012ರಲ್ಲಿ 20 ಸಾವಿರ ರೂ. ಸಾಲವಾಗಿ ಪಡೆದಿದ್ದರು. […]