. . .

ಯುವತಿಯರ ಅಶ್ಲೀಲ ಫೋಟೊ ಹಾಕಿ ಬ್ಲಾಕ್ಮೇಲ್ ಮಾಡುತ್ತಿದ್ದ ವ್ಯಕ್ತಿ ಬಂಧನ

20 Viewsಹಾಸನ: ಸಾಮಾಜಿಕ ಜಾಲತಾಣದಲ್ಲಿ ಯುವತಿಯರ ಅಶ್ಲೀಲ ಘೋಟೊಗಳನ್ನು ಹಾಕಿ ಬ್ಲಾಕ್ಮೇಲ್ ಮಾಡಿ ಹಣ ವಸೂಲು ಮಾಡುತ್ತಿರುವ ಜಾಲವೊಂದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಫೇಸ್‌ಬುಕ್‌ನಲ್ಲಿ ಕದ್ದ ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಹಣ ನೀಡುವಂತೆ ಅಮಾಯಕ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುತ್ತಿದ್ದ ಜಾಲವನ್ನು ಭೇದಿಸಿ ಆರೋಪಿಯೊಬ್ಬನನ್ನು ಹಾಸನದ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ.  ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಕೇಡಿಗೆ ಗ್ರಾಮದ, ಕಾರು ಚಾಲಕ ಪ್ರಶಾಂತ್ ರಾಜಶೇಖರ್ ವಾಮ (೨೪) ಎಂಬಾತನೇ ಬಂಧಿತ ಆರೋಪಿ. ಕೃತ್ಯದಲ್ಲಿ […]

ಶಾಸಕ ಪ್ರೀತಂ ಗೌಡ ವಿರುದ್ಧ ಎಫ್ಐಆರ್

10 Views    ಜೆಡಿಎಸ್ ಕಾರ್ಯಕರ್ತರಿಗೆ ಪ್ರಾಣ ಬೆದರಿಕೆ ಹಾಕಿದ ಆರೋಪದ ಮೇಲೆ ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.    ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಣ ಹಂಚಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ಪ್ರಾಣ ಬೆದರಿಕೆ ಒಡ್ಡಿರುವ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆ.ಆರ್.ಪೇಟೆ ಉಪಚುನಾವಣೆ ಹಿನ್ನಲೆಯಲ್ಲಿ ಹಲವು ಗ್ರಾಮಗಳಲ್ಲಿ ಮತದಾರರಿಗೆ ಹಣ ಹಂಚಿರುವ ವಿಷಯವನ್ನು ಯಾರಿಗಾದರೂ ಹೇಳಿದರೆ ಜೀವ ತೆಗೆಯುವುದಾಗಿ ಬುಧವಾರ ರಾತ್ರಿ ಶಾಸಕ ಪ್ರೀತಂ […]

ಉಪಚುನಾವಣೆ ಗದ್ದಲ ಹಿನ್ನೆಲೆ: ಚನ್ನರಾಯಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

14 Viewsನಿನ್ನೆ ರಾತ್ರಿ ಚನ್ನರಾಯಪಟ್ಟಣ ತಾಲೂಕಿನ ನಿಂಬೇಹಳ್ಳಿ ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ತಾಲೂಕಿನಾದ್ಯಂತ ಇಂದು ರಾತ್ರಿ 9.30ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ರಾಜ್ಯದಲ್ಲಿ ಇಂದು 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ಪೈಕಿ ಕೆ.ಆರ್. ಪೇಟೆ ಮತ್ತು ಹುಣಸೂರು ಕ್ಷೇತ್ರ ಬಿಜೆಪಿ-ಜೆಡಿಎಸ್ ನಡುವೆ ಪ್ರತಿಷ್ಠೆಯ ಕಣವಾಗಿ ಬದಲಾಗಿದೆ. ಈ ಕ್ಷೇತ್ರಗಳ ಮತದಾರರಿಗೆ ಹಣ ಹಂಚಲು ಬಿಜೆಪಿ ಹಾಸನದ ಮೂಲಕ […]

ಕಲುಷಿತ ಆಹಾರ ಸೇವಿಸಿದ ೪೦ ಮಂದಿ ಅಸ್ವಸ್ಥ

15 Viewsಕುಲುಷಿತ ಆಹಾರ ಸೇವಿಸಿ ೪೦ ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೇಲೂರಿನಲ್ಲಿ ನಡೆದಿದೆ. ಪಟ್ಟಣದ ಚೆನ್ನೇಗೌಡ ಬೀದಿಯ ಪ್ರಮೋದ್ ಎಂಬವರು ತಮ್ಮ ಗೃಹಪ್ರವೇಶಕ್ಕೆ ಕ್ಯಾಟರಿಂಗ್‌ ನೀಡಿ ಆಹಾರ ತರಿಸಿದ್ದರು. ಆಹಾರ ಸೇವಿಸಿದ ಸುಮಾರು ೪೦ ಮಂದಿ ಅಸ್ವಸ್ಥರಾಗಿದ್ದಾರೆ.    ಅಸ್ವಸ್ಥರು ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಆಹಾರ ಸಂರಕ್ಷಣಾ ಅಧಿಕಾರಿ ನವೀನ್‌ಕುಮಾರ್, ಆಹಾರ ಪದಾರ್ಥಗಳನ್ನು ಪರಿಶೀಲಿಸಿ, ಭಾರದ್ವಾಜ್ ಕೆಟರಿಂಗ್ ಮಾಲೀಕ ಬಿ.ಜಿ.ರಾಘವೇಂದ್ರ ಭಾರದ್ವಾಜ್‌ಗೆ ನೋಟಿಸ್ ಜಾರಿ […]