You cannot copy content of this page.
. . .

Category: ಜಿಲ್ಲಾ ಸುದ್ದಿ

ಇಬ್ಬರು ಬಾಲಕಿಯರ ಅನುಮಾನಾಸ್ಪದ ಸಾವು

 ಹನೂರು: ತಾಲ್ಲೂಕಿನ ಶಿರಗೋಡು ಗ್ರಾಮದಲ್ಲಿ ಗುರುವಾರ ರಾತ್ರಿ ಇಬ್ಬರು ಬಾಲಕಿಯರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈ ಬಗ್ಗೆ ಸಂಶಯ ವ್ಯಕ್ತವಾಗಿದೆ.  ಶಿರಗೋಡು ಗ್ರಾಮದ ಬಾಲಾಜಿ ಹಾಗೂ ಮಂಜುಳಾ ದಂಪತಿಯ ಪುತ್ರಿಯರಾದ ಲಕ್ಷ್ಮೀ (6) ಹಾಗೂ ಕೀರ್ತನಾ (11) ಮೃತ ದುರ್ದೈವಿಗಳು. ದಂಪತಿಗೆ ನಾಲ್ವರು ಪುತ್ರಿಯರು, ಒರ್ವ ಪುತ್ರ ಇದ್ದನು. ಇವರೆಲ್ಲರೂ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ, ಕಳೆದ ಒಂದು ತಿಂಗಳ ಹಿಂದೆ ಇವರೆಲ್ಲರೂ ಗ್ರಾಮಕ್ಕೆ ಆಗಮಿಸಿ ಇಲ್ಲಿಯೇ ನೆಲೆಸಿದ್ದರು.  ಗುರುವಾರ ರಾತ್ರಿ ಬಾಲಾಜಿಯ ಅಣ್ಣನ ಮನೆಯಲ್ಲಿ ಕೋಳಿ ಸಾಂಬಾರ್ ಮಾಡಲಾಗಿತ್ತು. […]

ಪ್ರೇಮಿಗಳ ದಿನವೇ ಪ್ರೇಮಿಗಳ ಆತ್ಮಹತ್ಯೆ

 ಮಡಿಕೇರಿ: ಪ್ರೇಮಿಗಳ ದಿನವೇ (ಶುಕ್ರವಾರ) ಹಾರಂಗಿ ಜಲಾಶಯ ಬಳಿ ಹಿನ್ನೀರುಗೆ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ಹುಣಸೂರಿನ ಸಚಿನ್, ಸಿಂಧು ಆತ್ಮಹತ್ಯೆಗೆ ಶರಣಾದ ದುದೈರ್ವಿ ಪ್ರೇಮಿಗಳು. ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಪ್ರೇಮಿಗಳ ದಿನವಾದ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಮೃತ ಸಿಂಧುಗೆ ಭಾನುವಾರ ಮದುವೆ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಹಾರಂಗಿಗೆ ಬೆಳಿಗ್ಗೆ ಬೈಕ್‌ನಲ್ಲಿ ಆಗಮಿಸಿದ ಜೋಡಿ ನೀರಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿಯ ಮರ್ಮಾಂಗ ಕತ್ತರಿಸಿ ದುಷ್ಕರ್ಮಿಗಳು ಪರಾರಿ

 ಕಾಲೇಜು ವಿದ್ಯಾರ್ಥಿಯ ಮರ್ಮಾಂಗ ಕತ್ತರಿಸಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.  ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದ ವಿದ್ಯಾರ್ಥಿಯ ಮರ್ಮಾಂಗ ಕತ್ತರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.  ಕಾಲೇಜು ಮುಗಿಸಿ ಗ್ರಾಮಕ್ಕೆ ಬರುವಾಗ ಮಾರ್ಗ ಮಧ್ಯೆ ವಿದ್ಯಾರ್ಥಿಯನ್ನು ಗ್ರಾಮಕ್ಕೆ ಬಿಡುವುದಾಗಿ ಹೇಳಿ ದುಷ್ಕರ್ಮಿಗಳು ಕಾರು ಹತ್ತಿಸಿಕೊಂಡಿದ್ದಾರೆ. ಮರ್ಮಾಂಗ ಕತ್ತರಿಸಿ ಮಧ್ಯೆದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನದಿಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳ ದುರ್ಮರಣ

 ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಇಂದು (ಶುಕ್ರವಾರ) ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.  ಮುದಾಸಮ್ (18), ತೌಸಿಫ್‍ (19), ಇಫ್ತೀಕಾರ್ (19) ಮೃತಪಟ್ಟ ವಿದ್ಯಾರ್ಥಿಗಳು. ಇವರು ಹಾಸನ ಜಿಲ್ಲೆಯವರಾಗಿದ್ದು, ಮೈಸೂರಿನ ಸಿದ್ದಿಖಿಯ ಅರೆಬಿಕ್ ಉರ್ದು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ.  ಶಭುಲಿಂಗಯ್ಯನ ಕಟ್ಟೆ ಬಳಿ ನದಿಯಲ್ಲಿ ಈಜಾಡಲು ತೆರಳಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಓರ್ವನ ಶವ ಪತ್ತೆಯಾಗಿದ್ದು, ಮತ್ತಿಬ್ಬರ ಶವಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. […]

ಪುಲ್ವಾಮ ದಾಳಿಗೆ ಒಂದು ವರ್ಷ; ಹುತಾತ್ಮ ಗುರು ಸಮಾಧಿಗೆ ಪೂಜೆ ಸಲ್ಲಿಸಲು ಬಾರದ ಪತ್ನಿ

 ಜಮ್ಮು ಕಾಶ್ಮೀರದ ಪುಲ್ವಾಮದ ಅವಂತಿಪುರದಲ್ಲಿ ಉಗ್ರರು ನಡೆಸಿದ್ದ ಬಾಂಬ್ ಸ್ಫೋಟದಲ್ಲಿ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾಗಿದ್ದರು. ಈ ದುರಂತ ಘಟನೆ ಸಂಭವಿಸಿ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ ಕರ್ನಾಟಕದ ಮಂಡ್ಯ ಜಿಲ್ಲೆ ಮದ್ದೂರಿನ ಯೋಧ ಗುರು ಕೂಡ ಹುತಾತ್ಮರಾಗಿದ್ದರು. ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿಯಲ್ಲಿ ಹುತಾತ್ಮ ಯೋಧ ಗುರು ಅವರ ಸ್ಮಾರಕ ಸಮಾಧಿಗೆ ಇಂದು ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ದೇಶಾಭಿಮಾನಿಗಳು ಗೌರವಾರ್ಪಣೆ ಮಾಡಿದರು. ಸ್ಮಾರಕ ಸಮಾಧಿಗೆ ತ್ರಿವರ್ಣ ಧ್ವಜ ಮಾದರಿಯಲ್ಲಿ ಹೂವಿನಿಂದ ಅಲಂಕಾರ ಮಾಡಿ ಕುಟುಂಬಸ್ಥರು ಪೂಜೆ […]

ಎರಡು ತಲೆ ಹಾವು ಮಾರಾಟಕ್ಕೆ ಯತ್ನ; ಐವರ ಬಂಧನ

 ಗೋಣಿಕೊಪ್ಪ: ಕಪ್ಪು ಬಣ್ಣದ ಎರಡು ತಲೆ ಹಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ವಿರಾಜಪೇಟೆ ತಾಲ್ಲೂಕು ಸಿಐಡಿ ಅರಣ್ಯ ಸಂಚಾರಿ ಪೊಲೀಸ್ ದಳ ಬಂದಿಸಿದ್ದಾರೆ.  ಆಂಧ್ರ ಮೂಲದ ನಿವಾಸಿಗಳಾದ ಮುಲ್ಲಾಮೆಹಬೂಬ್‌ವಲೀ (57), ಶೇಖ್‌ಮುಲ್ಲಾಚಾಂದ್‌ಪಾಶ (45), ಎಸ್.ಫಯಾಜ್ (27), ಬೋಯಿರಂಗಸ್ವಾಮಿ (45), ಶೇಕ್‌ಪೆದ್ದ ಮೆಹಬೂಬುಪಾಷ (29) ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಪೊನ್ನಂಪೇಟೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.  ಆಂದ್ರಪ್ರದೇಶದಿಂದ ಕೇರಳಕ್ಕೆ ಸಾಗಿಸಲು ಪ್ರಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೋಲಿಸರು ಆರೋಪಿಗಳನ್ನು ತಿತಿಮತಿ ಮುಖ್ಯ […]

JDS ಶಾಸಕನ ಹುಟ್ಟೂರಿಗೆ ಎಂಟ್ರಿ ಕೊಟ್ಟು ಅಹವಾಲು ಸ್ವೀಕರಿಸಿದ ಸಂಸದೆ ಸುಮಲತಾ

 ಜೆಡಿಎಸ್‍ ಶಾಸಕನ ಹುಟ್ಟೂರಿಗೆ ಭೇಟಿ ನೀಡಿ ಜನರಿಂದ ಅಹವಾಲು ಸ್ವೀಕರಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳನ್ನು ಸಂಸದೆ ಸುಮಲತಾ ತರಾಟೆಗೆ ತೆಗೆದುಕೊಂಡರು.  ಮಂಡ್ಯ ಜೆಡಿಎಸ್‍ ಶಾಸಕ ಎಂ.ಶ್ರೀನಿವಾಸ್‍ ಹುಟ್ಟೂರು ಹನಕೆರೆ ಗ್ರಾಮಕ್ಕೆ ಸಂಸದೆ ಸುಮಲತಾ ಪೂರ್ವ ನಿಗದಿಯಂತೆ ಗುರುವಾರ ಭೇಟಿ ನೀಡಿ ಜನರಿಂದ ಅಹವಾಲು ಸ್ವೀಕರಿಸಿದರು. https://youtu.be/O5JyIO1VrVg  ನಿವೇಶನ ಹಂಚಿಕೆಗೆ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಬುಧವಾರ ನಿಗದಿಯಾಗಿತ್ತು. ಆದರೆ, ಕಾರ್ಯಕ್ರಮ ಮುಂದೂಡುವಂತೆ ಶಾಸಕರು ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದರು. ಅದರಂತೆ ಜಿಲ್ಲಾಡಳಿತ ಕಾರ್ಯಕ್ರಮ ಮುಂದೂಡಿತ್ತು. […]

ಅರಣ್ಯ ಗುಮಾಸ್ತ ಎಸಿಬಿ ಬಲೆಗೆ

 ಚಾಮರಾಜನಗರ: ಭೂ ಪರಿವರ್ತನೆಗಾಗಿ 2,500 ರೂ. ಲಂಚ ಪಡೆಯುತ್ತಿದ್ದ ಗುಮಾಸ್ತ ಬುಧವಾರ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.  ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ದ್ವಿತೀಯ ದರ್ಜೆ ಗುಮಾಸ್ತ ಪುಟ್ಟಸ್ವಾಮಿ ಬಲೆಗೆ ಬಿದ್ದವರು. ಹರದನಹಳ್ಳಿಯ ರೈತ ಲಿಂಗರಾಜು ಅವರಿಂದ ಸಾರಿಗೆ ಬಸ್ ನಿಲ್ದಾಣ ಬಳಿ ಸಂಜೆ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.  ಕೃಷಿಯೇತರ ಉದ್ದೇಶಕ್ಕೆ ತಮ್ಮ ಭೂಮಿಯನ್ನು ಪರಿವರ್ತನೆ ಮಾಡಿಕೊಡುವಂತೆ ರೈತ ಅರ್ಜಿ ಸಲ್ಲಿಸಿದ್ದರು. ಅದನ್ನು ಮಾಡಿಕೊಡಲು ಲಂಚ ಕೇಳಿದ್ದರು ಎನ್ನಲಾಗಿದೆ. ಲಂಚ ನೀಡುವ […]

ತಂತಿ ಬೇಲಿಗೆ ಸಿಲುಕಿದ್ದ ಕಡವೆ ರಕ್ಷಣೆ

 ಮಡಿಕೇರಿ: ಆಹಾರ ಅರಸಿ ಕಾಡಿನಿಂದ ನಗರಕ್ಕೆ ಬಂದು ತಂತಿ ಬೇಲಿಗೆ ಸಿಲುಕಿ ನರಳುತ್ತಿದ್ದ ಕಡವೆಯನ್ನು ಸಾರ್ವಜನಿಕರು ರಕ್ಷಣೆ ಮಾಡಿದ ಘಟನೆ ಮಂಜಿನನಗರಿ ಮಡಿಕೇರಿಯಲ್ಲಿ ನಡೆದಿದೆ.  ನಗರದ ಜಿಲ್ಲಾ ಕ್ರೀಡಾಂಗಣದ ಬಳಿ ಬೆಳಗಿನ ಜಾವ ತಂತಿ ಬೇಲಿಗೆ ಸಿಲುಕಿಕೊಂಡು ಕಡವೆ ನರಳುತ್ತಿತ್ತು. ಇದನ್ನು ಕಂಡ ಸಾರ್ವಜನಿಕರು ಕಡವೆಯನ್ನು ರಕ್ಷಣೆ ಮಾಡಲು ಮುಂದಾದರು. ಆದರೆ ಕಡವೆ ಹತ್ತಿರ ಹೋಗುವುದಕ್ಕೆ ಭಯ ಪಡುತ್ತಿದ್ದ ಸಾರ್ವಜನಿಕರು, ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದರು.  ತಕ್ಷಣವೇ ಅರಣ್ಯ ಇಲಾಖೆಯ ಸಿಬ್ಬಂದಿ ಕಡವೆಯನ್ನು ತಂತಿ ಬೇಲಿಯಿಂದ […]

ಅಂಬೇಡ್ಕರ್ ನಾಮಫಲಕಕ್ಕೆ ಹಾನಿ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ

 ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಕಿಡಿಗೇಡಿಗಳು ಹಾನಿ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ದಲಿತ ಸಂಘಟನೆಗಳು ಇಂದು (ಮಂಗಳವಾರ) ಪ್ರತಿಭಟನೆ ನಡೆಸಿದರು.  ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ಕಿಡಿಗೇಡಿಗಳ ದುಷ್ಕತ್ಯ ಮೆರೆದಿದ್ದಾರೆ. ಗ್ರಾಮದ ಪ್ರವೇಶ ದ್ವಾರದಲ್ಲಿ ಹಾಕಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ನಾಮಫಲಕಕ್ಕೆ ತಡರಾತ್ರಿ ಕಿಡಿಗೇಡಿಗಳು ಹಾನಿ ಮಾಡಿ ಪರಾರಿಯಾಗಿದ್ದಾರೆ.  ಫಲಕ ಧ್ವಂಸ ಖಂಡಿಸಿ ದಲಿತ ಸಮುದಾಯಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ರಸ್ತೆಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ, ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಗಡಿ ಮುಂಗಟ್ಟುಗಳು […]