You cannot copy content of this page.
. . .

Category: ರಾಜಕೀಯ

ಸಿದ್ದರಾಮಯ್ಯ ಜೊತೆ ಅಧಿವೇಶನಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ

 ವಿಧಾನಮಂಡಲದ ಬಜೆಟ್‌ ಅಧಿವೇಶನಕ್ಕೆ ಶಾಸಕರು, ಸಚಿವರು ವಿಧಾನಸೌಧಕ್ಕೆ ಸೋಮವಾರ ಬೆಳಿಗ್ಗೆ 10 ಗಂಟೆಗೆ ಆಗಮಿಸಿದರು. ವಿಪಕ್ಷ ಸದಸ್ಯರು ವಿಧಾನಸೌಧದ ಪೂರ್ವ ದಿಕ್ಕಿನಿಂದ ಆಗಮಿಸಿದರು. ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು.  

ವಿಧಾನಮಂಡಲ ಅಧಿವೇಶನ; ರಾಜ್ಯಪಾಲ ವಜುಭಾಯಿ ವಾಲ ಭಾಷಣ

 ವಿಧಾನಮಂಡಲದ ಬಜೆಟ್‌ ಅಧಿವೇಶನ ಇಂದಿನಿಂದ (ಸೋಮವಾರ) ಆರಂಭಗೊಂಡಿದ್ದು, ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ ಮಾಡಿದರು.  ಅಧಿವೇಶನ ಮಾರ್ಚ್‌ 31ರವರೆಗೆ ನಡೆಯಲಿದೆ. ಅಧಿವೇಶನದ ಮೊದಲ ಮೂರು ದಿನವನ್ನು ರಾಜ್ಯಪಾಲರ ಭಾಷಣ ಚರ್ಚೆಗೆ ನಿಗದಿಪಡಿಸಲಾಗಿದೆ. ಮಾ.5ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್‌ ಮಂಡಿಸಲಿದ್ದಾರೆ.

ನಾಳೆಯಿಂದ ವಿಧಾನಸಭಾ ಅಧಿವೇಶನ; ಸಭೆ ನಡೆಸಿದ ಕಾಂಗ್ರೆಸ್‍ ಹಿರಿಯ ನಾಯಕರು

 ವಿಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು (ಭಾನುವಾರ) ಕಾಂಗ್ರೆಸ್‍ ಹಿರಿಯ ನಾಯಕರ ಸಭೆ ನಡೆಯಿತು.  ನಾಳೆ (ಸೋಮವಾರ) ವಿಧಾನಸಭೆ ಅಧಿವೇಶನ ನಡೆಯಲಿದೆ. ಈ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕರು ಇಂದು ಸಭೆ ನಡೆಸಿ ಚರ್ಚಿಸಿದ್ದಾರೆ. ಎಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ, ಕೆ.ಆರ್.ರಮೇಶ್‍ಕುಮಾರ್ ಇತರರು ಕಾಂಗ್ರೆಸ್‍ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ದೆಹಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್

 3ನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಇಂದು (ಭಾನುವಾರ) ಪ್ರಮಾಣ ವಚನ ಸ್ವೀಕರಿಸಿದರು. ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಕೇಜ್ರಿವಾಲ್‍ ಅವರಿಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಪ್ರಮಾಣ ವಚನ ಬೋಧಿಸಿದರು.  ಕೇಜ್ರಿವಾಲ್‌ ನೇತೃತ್ವದ ದೆಹಲಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಮನೀಷ್ ಸಿಸೋಡಿಯಾ, ಸಚಿವರಾಗಿದ್ದ ಸತ್ಯೇಂದ್ರ ಜೈನ್, ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಇಮ್ರಾನ್ ಹುಸೇನ್ ಮತ್ತು ರಾಜೇಂದ್ರ ಗೌತಮ್ ಅವರು ಈ ಬಾರಿಯೂ ಸಂಪುಟದಲ್ಲಿ ಸಚಿವರಾಗಿ […]

ಮಂತ್ರಿಯಾದ ಮಾತ್ರಕ್ಕೆ ಯಾರ ಪ್ರಕರಣವನ್ನೂ ಮುಚ್ಚಿ ಹಾಕಲು ಸಾಧ್ಯವಿಲ್ಲ: ಸಚಿವ ಎಸ್.ಟಿ.ಸೋಮಶೇಖರ್

 ಮಂತ್ರಿಯಾದ ಮಾತ್ರಕ್ಕೆ ಯಾರ ಪ್ರಕರಣವನ್ನೂ ಮುಚ್ಚಿ ಹಾಕಲು ಸಾಧ್ಯವಿಲ್ಲ. ಆನಂದ್‍ ಸಿಂಗ್‍ ಅವರ ಖಾತೆ ಕುರಿತು ತಲೆದೋರಿರುವ ಅಸಮಾಧಾನದ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಇದ್ದು, ಕ್ರಮಕೈಗೊಳ್ಳುತ್ತಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿದರು.  ಭಾನುವಾರ ಬೆಳಿಗ್ಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆನಂದ್‍ ಸಿಂಗ್‍ ಅವರಿಗೆ ಅರಣ್ಯ ಖಾತೆ ನೀಡಿರುವುದಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಸಿಎಂಗೆ ಮಾಹಿತಿ ಇದೆ. […]

ಕಣದಿಂದ ಹಿಂದೆ ಸರಿದ ಅಭ್ಯರ್ಥಿ; ಸವದಿ ಗೆಲುವು ಖಚಿತ

  ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅನಿಲ್ ಕುಮಾರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಕಾಂಗ್ರೆಸ್‌ನಿಂದ ಪೂರ್ಣಪ್ರಮಾಣದ ಬೆಂಬಲ ಸಿಗದ ಕಾರಣ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದಾಗಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವು ಖಚಿತವಾದಂತಾಗಿದೆ.    ಫೆ.17ರಂದು ಸೋಮವಾರ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ರಿಜ್ವಾನ್ ಅರ್ಷದ್ ಉಪಚುನಾವಣೆಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರಿಂದ ಈ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.  ಕಾಂಗ್ರೆಸ್‌ನ ಹಿರಿಯ […]

ಟ್ರಂಪ್‍ ಭಾರತ ಭೇಟಿ; 3 ಗಂಟೆ ಕಾರ್ಯಕ್ರಮಕ್ಕೆ ಖರ್ಚೆಷ್ಟು ಗೊತ್ತಾ..?

  ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫೆಬ್ರವರಿ 24 ಹಾಗೂ 25 ರಂದು ಭಾರತ ಪ್ರವಾಸ ಕೈಗೊಂಡಿದ್ದಾರೆ. ಗುಜರಾತ್‌ಗೆ ಆಗಮಿಸಲಿರುವ ಟ್ರಂಪ್‌ ಅವರಿಗೆ ಕೆಂಪು ಹಾಸಿನ ಸ್ವಾಗತ ಕೋರಲು ಅಲ್ಲಿ ಸರ್ಕಾರ ಸಜ್ಜಾಗಿದೆ. ಒಟ್ಟು 3 ಗಂಟೆಗಳ ಕಾರ್ಯಕ್ರಮಕ್ಕೆ ಗುಜರಾತ್‌ ಸರ್ಕಾರ ಬರೋಬ್ಬರಿ 100 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ.   ಅಹಮದಾಬಾದ್‌ನಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ನಂತರ ಸಬರಮತಿ ಆಶ್ರಮಕ್ಕೂ ಭೇಟಿ ನೀಡಲಿದ್ದಾರೆ. ಗುಜರಾತ್‌ನಲ್ಲಿ ಟ್ರಂಪ್‌ ಮೂರು ಗಂಟೆಗೂ ಹೆಚ್ಚು ಇರಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ […]

ಶಾಸಕರು ಕಾಂಗ್ರೆಸ್ನಲ್ಲಿ ಇರುವವರೆಗೆ ಮಾತ್ರ ಪತಿವ್ರತರೇ?; ಸಚಿವ ಸಿ.ಟಿ.ರವಿ ವ್ಯಂಗ್ಯ

  ಶಾಸಕರೆಲ್ಲಾ ಕಾಂಗ್ರೆಸ್‌ನಲ್ಲಿ ಇರುವವರೆಗೂ ಮಾತ್ರ ಪತಿವ್ರತರು, ಪಕ್ಷ ಬಿಟ್ಟು ಬಂದರೆ ಕೆಟ್ಟವರು ಎಂಬುದು ಕಾಂಗ್ರೆಸ್ ಭಾವನೆ ಅಂತ ಕಾಣುತ್ತೆ ಎಂದು ಸಚಿವ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.  ಮೈಸೂರು ನಗರದ ಭಾರತೀಯ ಭಾಷಾ ಸಂಸ್ಥಾನದಲ್ಲಿ ಮಾಧ್ಯಮಗಳೊಂದಿಗೆ ಆನಂದ್ ಸಿಂಗ್‌ಗೆ ಅರಣ್ಯ ಖಾತೆ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿದ ಅವರು, ಅವರು ಈಗಷ್ಟೇ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ದುರ್ಬಳಕೆಯ ಪ್ರಶ್ನೆಯೇ ಇಲ್ಲ. ಅವರು ಅಂತಹ ಕೆಲಸ ಏನೂ ಮಾಡಿಲ್ಲ. ಸಿದ್ದರಾಮಯ್ಯನವರೇ ಅವರ ಪರವಾಗಿ ಪ್ರಚಾರ ಮಾಡಿ ಗೆಲ್ಲಿಸಿದರು. […]

ಸಿಎಂ ಮನೆಗೆ ಮುತ್ತಿಗೆ ಯತ್ನ; ಕಾಂಗ್ರೆಸ್‍ ನಾಯಕರು ವಶಕ್ಕೆ

   ಬೀದರ್​ನ ಶಾಹೀನ್ ಶಾಲೆಯ ವಿರುದ್ಧ ದೇಶದ್ರೋಹ ಪ್ರಕರಣದಲ್ಲಿ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್​ ನಾಯಕರು ಇಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ  ಸಿದ್ದರಾಮಯ್ಯ, ಮಾಜಿ ಸಚಿವ ರಾಮಲಿಂಗ ರೆಡ್ಡಿ ಸೇರಿ ಹಲವು ಕಾಂಗ್ರೆಸ್​​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.      ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ನರೇಂದ್ರ ಮೋದಿ, ಅಮಿತ್ […]

SC/ST ಮುಂಬಡ್ತಿ ಹಕ್ಕು ಮೊಟಕು; ಕಾಂಗ್ರೆಸ್‍ ನಿಂದ ಪ್ರತಿಭಟನೆ

   ಎಸ್.ಸಿ/ಎಸ್.ಟಿ/ಒಬಿಸಿ ವರ್ಗದ ಮೀಸಲಾತಿ ಮುಂಬಡ್ತಿ ಹಕ್ಕನ್ನು ಮೊಟಕುಗೊಳಿಸಿರುವುದರ ವಿರುದ್ಧ ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು (ಶನಿವಾರ) ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.   ಮೈಸೂರಿನ ಗಾಂಧಿ ಚೌಕದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಪ.ಜಾತಿ/ಪ.ಪಂಗಡದ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ಕುರಿತು ಸರ್ವೋಚ್ಛ ನ್ಯಾಯಾಲಯದ ವ್ಯಾಖ್ಯಾನದ ಮರುಪರಿಶೀಲನೆಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.   ನ್ಯಾಯಾಧೀಶರಾದ ಎಲ್.ನಾಗೇಶ್ವರರಾವ್ ಮತ್ತು ಹೇಮಂತ್ ಗುಪ್ತ ಈ ತೀರ್ಪನ್ನು ನೀಡಿದ್ದಾರೆ. ಉತ್ತರಾಖಂಡ ರಾಜ್ಯವು ಪ.ಜಾತಿ, ಪ.ಪಂಗಡದವರಿಗೆ ಭಡ್ತಿಯಲ್ಲಿ […]