You cannot copy content of this page.
. . .

Category: BREAKING NEWS

ಸಿಎಂ ಸ್ವಿಜರ್ಲೆಂಡ್‍ ಪ್ರವಾಸ

 ಕರ್ನಾಟಕದಲ್ಲಿ ಹೂಡಿಕೆ ಸಂಬಂಧ ಸ್ವಿಜರ್ಲೆಂಡ್‍ ಉದ್ಯಮಿಗಳ ಜೊತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಇಂದಿನಿಂದ (ಭಾನುವಾರ) 6 ದಿನಗಳ ಕಾಲ ಸಿಎಂ ವಿದೇಶ ಪ್ರವಾಸ ಕೈಗೊಂಡಿದ್ದು, ಅವರಿಗೆ ಸಚಿವ ಜಗದೀಶ್‍ ಶೆಟ್ಟರ್‍ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಾಥ್‍ ನೀಡಲಿದ್ದಾರೆ.  ಸ್ವಿಜರ್ಲೆಂಡ್‍ನ ದಾವೋಸ್‍ನಲ್ಲಿ ನಡೆಯುವ ವಿಶ್ವ ಅರ್ಥಿಕ ಒಕ್ಕೂಟದ ಶೃಂಗಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಕರ್ನಾಟಕದಲ್ಲಿ ಹೊಡಿಕೆ ಸಂಬಂಧ ಪೂರ್ವಭಾವಿ ಸಮಾವೇಶ ಹಾಗೂ ಸ್ವಿಜರ್ಲೆಂಡ್ ಉದ್ಯಮಿಗಳ ಜೊತೆ ಸಭೆಗಳಲ್ಲಿ ಭಾಗವಹಿಸಿ ಚರ್ಚಿಸಲಿದ್ದಾರೆ. ಶೃಂಗಸಭೆ ಸಮಾವೇಶದಲ್ಲಿ […]

ಮಗುವಿಗೆ ಪಲ್ಸ್ ಪೊಲಿಯೊ ಲಸಿಕೆ ಹಾಕಿದ ಅಮಿತ್‍ ಶಾ

 ಹುಬ್ಬಳ್ಳಿ: ಸಂಸದ ಪ್ರಹ್ಲಾದ್‍ ಜೋಶಿ ಅವರ ನಿವಾಸದ ಎದುರು ಕೇಂದ್ರದ ಗೃಹ ಮಂತ್ರಿ ಅಮಿತ್‍ ಶಾ ಅವರು ಮಗುವಿಗೆ ಪೊಲಿಯೊ ಲಿಸಿಕೆ ಹಾಕುವ ಮೂಲಕ ಪಲ್ಸ್ ಪೊಲಿಯೊಗೆ ಚಾಲನೆ ನೀಡಿದರು.  ಜೋಶಿ ಅವರ ಮನೆಯಲ್ಲಿಯೇ ಉಪಾಹಾರ ಸೇವಿಸಿ, ಕಾರ್ಯಕರ್ತರೊಂದಿಗೆ ಕೆಲ ಸಮಯ ಮಾತನಾಡಿದರು. ನಂತರ ವಾಯುಮಾರ್ಗವಾಗಿ ದೆಹಲಿಗೆ ಹಿಂದಿರುಗಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

ಸಚಿವ ಸ್ಥಾನ ಆಕಾಂಕ್ಷಿಗಳ ಋಣ ತೀರಿಸುತ್ತೇವೆ; ಕೆ.ಎಸ್.ಈಶ್ವರಪ್ಪ

 ಸಚಿವ ಸ್ಥಾನ ಆಕಾಂಕ್ಷಿಗಳ ಋಣ ನಮ್ಮ ಮೇಲಿದೆ. ಅವರ ಋಣ ತೀರಿಸುವುದು ನಮ್ಮ ಕರ್ತವ್ಯ ಎಂದು ಸಚಿವ ಕೆ.ಎಸ್‍.ಈಶ್ವರಪ್ಪ ಹೇಳಿದರು.  ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಆಕಾಂಕ್ಷಿಗಳ ಋಣ ತೀರಿಸುವ ಕೆಲಸ ಮಾಡುತ್ತೇವೆ. ಅವರಿಂದಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿದೆ. ಹೀಗಾಗಿ, ಅವರ ಋಣ ತೀರಿಸಬೇಕಾಗಿದೆ ಅಷ್ಟೆ ಎಂದು ನುಡಿದರು.  ಕೇಂದ್ರ ಸಚಿವ ಅಮಿತ್ ಶಾ ಅವರ ರಾಜ್ಯ ಪ್ರವಾಸಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬಂದಿದ್ದರು. ಸ್ಥಳೀಯ ಮುಖಂಡರೊಡನೆ […]

ಗಂಡ ಹೆಂಡಿರ ಜಗಳ ಪತ್ನಿಯ ಸಾವಿನಲ್ಲಿ ಅಂತ್ಯ

 ಮೈಸೂರು: ಗಂಡ ಹೆಂಡಿರ ಜಗಳ ಪತ್ನಿಯ ಸಾವಿನಲ್ಲಿ ಅಂತ್ಯ ಕಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.  ನಗರದ ಇಲವಾಲದ ಮಾದಹಳ್ಳಿಯಲ್ಲಿ ಘಟನೆ ನಡೆದಿದ್ದು, ಸುನಿತಾ (೩೮) ಸಾವನ್ನಪ್ಪಿದ ದುರ್ದೈವಿ. ಘಟನೆ ಬಳಿಕ ಆಕೆಯ ಪತಿ ಶ್ರೀನಿವಾಸ್‍ ನಾಪತ್ತೆಯಾಗಿದ್ದಾರೆ. 17 ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಈ ದಂಪತಿ, ಸ್ವಂತ ಜಮೀನಿನಲ್ಲಿ ಮನೆ ಮಾಡಿಕೊಂಡಿದ್ದ ಜೀವನ ನಡೆಸುತ್ತಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರತಿದಿನದಂತೆ ನಿನ್ನೆಯೂ (ಶುಕ್ರವಾರ) ಇಬ್ಬರ ನಡುವೆ ಜಗಳವಾಗಿದೆ.  ಆಟವಾಡುತ್ತಿದ್ದ ಮಕ್ಕಳು ಮನೆಗೆ ವಾಪಸ್ ಬಂದಾಗ ಬಾಗಿಲಿನಲ್ಲೇ […]

ಸಿಎಎ ವಿರೋಧಿಸುವವರು ದಲಿತ ವಿರೋಧಿಗಳು; ಅಮಿತ್‍ ಶಾ

 ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸುವವರನ್ನು ನಾನು ಕೇಳುವ ಪ್ರಶ್ನೆಯೆಂದರೆ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದ ದಲಿತರ ವಿರುದ್ಧ ಹೋಗುವುದರಿಂದ ನೀವು ಏನು ಗಳಿಸುವಿರಿ? ಸಿಎಎಯನ್ನು ವಿರೋಧಿಸುವವರು ದಲಿತ ವಿರೋಧಿಗಳು ಎಂದು ಕೇಂದ್ರ ಗೃಹ ಮಂತ್ರಿ ಅಮಿತ್‍ ಶಾ ಹೇಳಿದರು.  ಹುಬ್ಬಳ್ಳಿಯಲ್ಲಿ ಶನಿವಾರ ಆಯೋಜಿಸಿದ್ದ ಸಿಎಎ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತದ ನೆರೆ ರಾಷ್ಟ್ರಗಳಿಂದ ದೌರ್ಜನ್ಯಕ್ಕೆ ಒಳಗಾಗಿ ತಪ್ಪಿಸಿಕೊಂಡು ಬರುವ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಪೌರತ್ವ ನೀಡಲು ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಆದರೆ, ವೋಟ್‍ ಬ್ಯಾಂಕ್‍ಗಾಗಿ […]

ಶಬರಿಮಲೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ವಾಹನ ಪಲ್ಟಿ…

 ಚಾಮರಾಜನಗರ: ಶಬರಿಮಲೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಟೆಂಪೋ ಟ್ರಾವೆಲರ್​ವೊಂದು ಪಲ್ಟಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಪುರದ ಬಳಿ ನಡೆದಿದೆ. ಯಾತ್ರಾರ್ಥಿಗಳು ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ.  ಯಾತ್ರಾರ್ಥಿಗಳಿದ್ದ ಟೆಂಪೊ ಗುಂಡ್ಲುಪೇಟೆಯ ರಾಘವಾಪುರದ ಬಳಿ ತೆರಳುತ್ತಿತ್ತು. ಈ ವೇಳೆ ಮುಂದೆ ಸಾಗುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಟೆಂಪೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರಿನ ಮಾಗಡಿಯಿಂದ ಶಬರಿಮಲೆಗೆ 11 ಮಂದಿ ಮಾಲಾಧಾರಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.  ಅದೃಷ್ಟವಶಾತ್ ಯಾತ್ರಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ವಾಹನ ಪಲ್ಟಿಯಾಗಿದ್ದರಿಂದ ಅಪಶಕುನವೆಂದು […]

ಮಗನಿಂದಲೇ ತಂದೆ ಹತ್ಯೆ

 ಮದ್ಯಸೇವನೆಗೆ ಹಣ ನೀಡದ್ದಕ್ಕೆ ಕೋಪಗೊಂಡು ತಂದೆಯನ್ನೇ ಹತ್ಯೆ ಮಾಡಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.  ಸೋಮವಾರಪೇಟೆಯ ಗೋಣಿಮರೂರಿನಲ್ಲಿ ಈ ಘಟನೆ ನಡೆದಿದೆ. ಜೇನುಕುರುಬರ ಕರಿಯಪ್ಪ (46) ಹತ್ಯೆಯಾದ ದುರ್ದೈವಿ. ಮಗ ಲೋಕೇಶ್ ಎಂಬಾತನಿಂದ ಕುಕೃತ್ಯ ಆಗಿದೆ. ಲೋಕೇಶ್‍ ಮದ್ಯ ಸೇವನೆಗೆ ತಂದೆ ಬಳಿ ಹಣ ಕೇಳಿದ್ದಾನೆ. ತಂದೆ ಹಣ ನೀಡದ್ದಕ್ಕೆ ಕೋಪಗೊಂಡು ಕೊಲೆ ಮಾಡಿದ್ದಾನೆ. ತಾಯಿ ಲೀಲಾ ಮೇಲೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಗೋ ಬ್ಯಾಕ್‍ ಅಮಿತ್‍ ಶಾ’ ಎಂದ ಪ್ರತಿಭಟನಾಕಾರರು ಪೊಲೀಸರ ವಶಕ್ಕೆ

 ಸಿಎಎ ಪರವಾಗಿ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್‍ ಶಾ ಹುಬ್ಬಳ್ಳಿಗೆ ಭೇಟಿ ನೀಡುವುದನ್ನು ವಿರೋಧಿಸಿ ಸಂವಿಧಾನ ರಕ್ಷಣಾ ಸಮಿತಿ ಪ್ರತಿಭಟನೆ ನಡೆಯಿತು. ಪೊಲೀಸರ ಅನುಮತಿ ನಿರಾಕರಣೆಯ ನಡುವೆಯೂ ‘ಗೋ ಬ್ಯಾಕ್ ಅಮಿತ್ ಶಾ’ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಲು ಮುಂದಾದ ಸಮಿತಿಯ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು.  ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ಬಳಿ ನೆರೆದಿದ್ದ ಪ್ರತಿಭಟನಾಕಾರರನ್ನು ತಡೆದು ಪೊಲೀಸರು ಪ್ರತಿಭಟನೆ ನಡೆಸದಂತೆ ಮನವಿ ಮಾಡಿದರು. ಇದನ್ನು ಲೆಕ್ಕಿಸದೇ ಪ್ರತಿಭಟನೆಗೆ ಮುಂದಾದವರನ್ನು ವಶಕ್ಕೆ ಪಡೆದು ಬಸ್‍ನಲ್ಲಿ […]

ವಿಚಾರಣೆಗೆ ಹಾಜರಾಗುವಂತೆ ನಟಿ ರಶ್ಮಿಕಾ ಮಂದಣ್ಣ, ಕುಟುಂಬಸ್ಥರಿಗೆ ಐ.ಟಿ ನೋಟಿಸ್

 ದಕ್ಷಿಣ ಭಾರತ ಚಿತ್ರರಂಗದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹಾಗೂ ಕುಟುಂಬಸ್ಥರಿಗೆ ಐ.ಟಿ ಸಮನ್ಸ್‍ ನೀಡಿದೆ. ಸೋಮವಾರ ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಮೈಸೂರಿನ ಐಟಿ ಕಚೇರಿಗೆ ಹಾಜರಾಗುವಂತೆ ರಶ್ಮಿಕಾ ಮತ್ತು ಕುಟುಂಬಸ್ಥರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.  ಐಟಿ ಅಧಿಕಾರಿಗಳು ರಶ್ಮಿಕಾ ಮನೆಯಲ್ಲಿ ಸತತ ಎರಡು ದಿನಗಳ ಕಾಲ ದಾಳಿ ನಡೆಸಿ ಸಾಕಷ್ಟು ಮಾಹಿತಿ ಕಲೆ ಹಾಕಿದ್ದರು. ಜೊತೆಗೆ ದಾಖಲೆ ಇಲ್ಲದ 25 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತೆರಿಗೆ ವಂಚನೆ ಮಾಡಿರುವ ಕೋಟ್ಯಂತರ ಆಸ್ತಿಯ […]

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೇ ಕನ್ನ ಹಾಕಿದ ಕಳ್ಳರು

 ಮೈಸೂರು ಜಿಲ್ಲೆಯ ತಿ.ನರಸೀಪುರದ ಕುಪ್ಯ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ತಡರಾತ್ರಿ ಕಳ್ಳತನವಾಗಿದೆ. ತಡರಾತ್ರಿ ಆರೋಗ್ಯ ಕೇಂದ್ರದಲ್ಲಿ ಬೀಗ ಮುರಿದ ಕಳ್ಳರು ಬೆಲೆಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.  ಸುಮಾರು ಒಂದು ಲಕ್ಷ ಮೌಲ್ಯದ ಕಂಪ್ಯೂಟರ್, ups, ಟಿ.ವಿ., ಜೆರಾಕ್ಸ್ ಮೆಷಿನ್, ಪ್ರಿಂಟರ್ ಕಳ್ಳತನವಾಗಿದೆ. ತಿ.ನರಸೀಪುರ ಪೊಲೀಸ್‍ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.