You cannot copy content of this page.
. . .

   ದೇಶದ ಸಂವಿಧಾನದ ಮಹತ್ವದ ಕುರಿತು ಶಾಲಾ ಹಂತದಲ್ಲೇ  ಜಾಗೃತಿ ಮೂಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿನಿತ್ಯ ಪ್ರಾರ್ಥನೆಯ ಅವಧಿಯಲ್ಲಿ ಸಂವಿಧಾನದ ಪ್ರಸ್ತಾವನೆ ಅಥವಾ ಪೀಠಿಕೆಯನ್ನು ಓದುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

  ಸಂವಿಧಾನದ ಪ್ರಸ್ತಾವನೆಯನ್ನು ಓದಿ ಹೇಳಬೇಕು ಮತ್ತು ಉಪಸ್ಥಿತರೆಲ್ಲರೂ ಅದನ್ನು ಉಚ್ಚರಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ. ಶಾಲಾ ವ್ಯಾಪ್ತಿಯಲ್ಲಿರುವ ಸಂವಿಧಾನ ತಜ್ಞರನ್ನು ಶಾಲೆಗೆ ಆಹ್ವಾನಿಸಿ ಅವರಿಂದ ವಿಶೇಷ ಉಪನ್ಯಾಸವನ್ನು ಏರ್ಪಡಿಸುವ ಮೂಲಕ ಮಕ್ಕಳಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಕೂಡಾ ಸರ್ಕಾರ ಸೂಚನೆ ನೀಡಿದೆ.

ಸಂವಿಧಾನದ ಪೀಠಿಕೆ ಹೀಗಿದೆ:
“ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಪ್ರಜಾಸತ್ತಾತ್ಮಕ, ಸಮಾಜವಾದಿ, ಜಾತ್ಯತೀತ, ಗಣರಾಜ್ಯವನ್ನಾಗಿ ನಿರ್ಮಿಸುವ ಸಲುವಾಗಿ ಮತ್ತು ಭಾರತದ ಸಮಸ್ತ ಪ್ರಜೆಗಳಿಗೆ, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ದೊರಕುವಂತೆಯೂ, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಗಳ ಸ್ವಾತಂತ್ರ್ಯ ದೊರಕುವಂತೆ ಮಾಡುವುದು, ಅಂತಸ್ತು ಮತ್ತು ಅವಕಾಶದಲ್ಲಿ ಸಮಾನತೆಯನ್ನು ಸಾಧಿಸುವ ಹಾಗೂ ಎಲ್ಲರಿಗೂ ವ್ಯಕ್ತಿ ಗೌರವ ದೊರಕಿ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆ ಇವುಗಳನ್ನು ವೃದ್ಧಿಗೊಳಿಸಿ, ಭ್ರಾತೃತ್ವ ಭಾವನೆಯನ್ನು ಎಲ್ಲರಲ್ಲೂ ಬೆಳೆಸಲು ದೃಢ ಸಂಕಲ್ಪ ಮಾಡಿ ಈ ಸಂವಿಧಾನವನ್ನು ಅಂಗೀಕರಿಸಿ ಶಾಸನ ಮಾಡಿ ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ”

 

%d bloggers like this: