You cannot copy content of this page.
. . .

 ಕೊಡಗು ಜಿಲ್ಲೆಯ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಸೆಕ್ಯೂರಿಟಿ ಗಾರ್ಡ್‍ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

 ದರ್ಶನ್ ಎಂಬ ವ್ಯಕ್ತಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಮಹಿಳಾ ಸಿಬ್ಬಂದಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆತನನ್ನು ಹೊರ ಕಳುಹಿಸಲು ಮುಂದಾದ ಸೆಕ್ಯೂರಿಟಿ ಗಾರ್ಡ್ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೊಲೀಸ್‍ ಠಾಣೆಗೆ ದೂರು ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ವಿರಾಜಪೇಟೆ ನಗರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

%d bloggers like this: