You cannot copy content of this page.
. . .

 ಚಾಮರಾಜನಗರ: ಜಮೀನು ವಿಚಾರವಾಗಿ ಇಬ್ಬರ ನಡುವೆ ಉಂಟಾಗಿದ್ದ ವೈಮನಸ್ಸು ಕೊಲೆಯಲ್ಲಿ ಅಂತ್ಯ ಕಂಡಿದೆ.

 ಚಾಮರಾಜನಗರ ತಾಲ್ಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಪುಟ್ಟಸ್ವಾಮಪ್ಪ (59) ಕೊಲೆಯಾದ ವ್ಯಕ್ತಿ. ಹತ್ಯೆ ಮಾಡಿದ್ದಾರೆ ಎನ್ನಲಾದ ಸೋಮಪ್ಪ (ಸೋಮೇಶ್ವರ್) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

 ಸೋಮಪ್ಪ ಮತ್ತು ಪುಟ್ಟಸ್ವಾಮಪ್ಪ ನಡುವೆ ಜಮೀನಿನ ವಿಚಾರದಲ್ಲಿ ಮೊದಲಿನಿಂದಲೂ ಆಗಾಗ ಜಗಳವಾಗುತ್ತಿತ್ತು. ಇಂದು ಮುಂಜಾನೆ ಇದೇ ವಿಚಾರಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ ಕೋಪಗೊಂಡ ಸೋಮಪ್ಪ ಪುಟ್ಟಸ್ವಾಮಪ್ಪಗೆ ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

 

%d bloggers like this: