You cannot copy content of this page.
. . .

 ಮಡಿಕೇರಿ: ಲಕ್ಷಾಂತರ ರೂ. ಮೌಲ್ಯದ ಆನೆ ದಂತಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ. ದಂತ ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

 ಅಪ್ಪಂಗಳ ಹೆರವನಾಡು ನಿವಾಸಿ ಪಿ.ಕೆ.ದಿನೇಶ್. ಈತ ಸಕಲೇಶಪುರದ ಕುಮಾರ ಎಂಬಾತನಿಂದ ಅಂದಾಜು ೩೦ ಲಕ್ಷ ರೂ. ಮೌಲ್ಯದ ಎರಡು ಆನೆ ದಂತಗಳನ್ನು ಪಡೆದು, ಆತನೊಂದಿಗೆ ಧರ್ಮಸ್ಥಳದ ಕಡೆಗೆ ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂದಿಸಿದ್ದಾರೆ. ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಬೆಳ್ತಂಗಡಿಯ ವಲಯ ಅರಣ್ಯಾಧಿಕಾರಿಗಳ ಕಚೇರಿಗೆ ವರ್ಗಾಯಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.   

 

%d bloggers like this: