You cannot copy content of this page.
. . .

  ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಸಿಂಗಾನಲ್ಲೂರು ಗ್ರಾಮದ ಜನರಲ್ಲಿ ವಿಚಿತ್ರ ಜ್ವರ ಕಾಣಿಸಿಕೊಂಡಿದೆ. ಹಲವು ದಿನಗಳಿಂದ ಗ್ರಾಮದ 20ಕ್ಕೂ ಹೆಚ್ಚು ಜನರು ಜ್ವರದಿಂದ ಬಳಲುತ್ತಿದ್ದಾರೆ. ಹೀಗಿರುವಾಗಲೇ ಸಿಂಗಾನಲ್ಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಧ್ಯಕ್ಷ ಮಲ್ಲಯ್ಯರ ಪುತ್ರ ಸಾಗರ್ (30) ಡೆಂಗ್ಯೂ ಮಹಾಮಾರಿಗೆ ಬಲಿಯಾಗಿದ್ದಾರೆ. ಹೀಗಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

  ಕಳೆದ 20 ದಿನಗಳಿಂದ ಗ್ರಾಮದ ಜನ ಜ್ವರದಿಂದ ಬಳಲುತ್ತಿದ್ದಾರೆ. 8 ರಿಂದ 10 ಮಂದಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಿದ್ದರೂ ಇಷ್ಟು ದಿನ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

%d bloggers like this: