You cannot copy content of this page.
. . .

ಹೈದರಾಬಾದ್ ಎನ್ ಕೌಂಟರ್; ಪೊಲೀಸರ ಟೀಕೆ ಸರಿಯಲ್ಲ-ಯದುವೀರ್

ಹೈದರಾಬಾದ್‌ನಲ್ಲಿ ಪಶುವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಎನ್‍ ಕೌಂಟರ್‍ ಮಾಡಿರುವ ಪೊಲೀಸರ ಕ್ರಮವನ್ನು ಟೀಕಿಸುವುದು ಸರಿಯಲ್ಲ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಒಡೆಯರ್ ಹೇಳಿದರು.  
  ಮೈಸೂರಿನಲ್ಲಿ ಶನಿವಾರ ಮಾತನಾಡಿದ ಅವರು, ಇಂತಹ ಘಟನೆಗಳಿಂದ ಯಾರಿಗೂ ಸಂತೋಷವಾಗಿಲ್ಲ, ಸಮಾಧಾನ ಉಂಟಾಗಿದೆ. ಹೈದರಾಬಾದ್ ಪೊಲೀಸರು ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ನಡೆದುಕೊಂಡಿದ್ದಾರೆ ಎಂದರು.
ಪ್ರಕರಣ ಮಹಜರು ವೇಳೆ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಲು ಅವರು ಎನ್‌ಕೌಂಟರ್ ಮಾಡಿದ್ದಾರೆ ಎನ್ನಲಾಗಿದೆ. ನಮ್ಮೆಲ್ಲರಿಗೂ ಕಾನೂನಿನ ಮೂಲಕವೇ ಎಲ್ಲವೂ ಬಗೆಹರಿಯಬೇಕು ಎಂಬ ಆಸೆ ಇದೆ. ಈಗ ಆಗಿರುವುದು ಕಾನೂನು ಪ್ರಕಾರ ಆಗಿದ್ದರೆ ಅದು ತಪ್ಪಲ್ಲ. ರಾಜರ ಕಾಲಕ್ಕೂ, ಇಂದಿನ ಕಾಲಕ್ಕೂ ವ್ಯತ್ಯಾಸ ಇದ್ದು, ಕಾನೂನು ಬದಲಾವಣೆಗಿಂತ ತ್ವರಿತವಾಗಿ ಕಾನೂನಿನ ಮೂಲಕ ಶಿಕ್ಷೆಯಾಗಲಿ ಎನ್ನುವುದು ನಮ್ಮೆಲ್ಲರ ಆಶಯವಾಗಿದೆ ಎಂದರು. 

 

%d bloggers like this: