You cannot copy content of this page.
. . .

ಬಿಳಿಗಿರಿರಂಗನಬೆಟ್ಟದ ಕೆ.ಗುಡಿಯಲ್ಲಿ ವಾಸ್ತವ್ಯ ಹೂಡಿರುವ ನಿವೃತ್ತ ಸಿಜೆಐ ರಂಜನ್ ಗೊಗೊಯಿ

 ಚಾಮರಾಜನಗರ: ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಭಾನುವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.

 ನಗರದ ರಾಮಸಮುದ್ರದಲ್ಲಿನ ಹರಳುಕೋಟೆ ಆಂಜನೇಯ ದೇಗುಲಕ್ಕೆ ಪತ್ನಿಯೊಂದಿಗೆ ಭೇಟಿ ನೀಡಿದ ರಂಜನ್ ಗೊಗೊಯಿ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ರಂಜನ್ ಗೊಗೊಯಿ ಅವರು ಭಾನುವಾರ ಸಂಜೆ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ ಕೆ.ಗುಡಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.

ನಾಳೆ ಸುತ್ತೂರು ಶ್ರೀಗಳಿಂದ ಆಶೀರ್ವಚನ ಪಡೆಯಲಿರುವ ನಿವೃತ್ತ ಸಿಜೆಐ

 ಸೋಮವಾರ ಬೆಳಿಗ್ಗೆ ಬಿಳಿಗಿರಿರಂಗನ ಬೆಟ್ಟದಲ್ಲಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳಿಂದ ಆಶೀರ್ವಚನ ಪಡೆಯಲಿದ್ದಾರೆ. ನಂತರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಹಿಮವದ್ ಗೋಪಾಲಸ್ವಾಮಿಬೆಟ್ಟಕ್ಕೆ ಭೇಟಿ ನೀಡುವರು ಎಂದು ಮಾಹಿತಿ ತಿಳಿದು ಬಂದಿದೆ.

 

%d bloggers like this: