You cannot copy content of this page.
. . .

ಪಶ್ಚಿಮ ಬಂಗಾಳದಲ್ಲಿ ರೈತರ ಆದಾಯ 3 ಪಟ್ಟು ಹೆಚ್ಚಳ..!

   ಕೃಷಿ ಕ್ಷೇತ್ರದಲ್ಲಿ ನಷ್ಟವೇ ಜಾಸ್ತಿ, ಲಾಭ ಬರೋದಿಲ್ಲ ಎಂಬುದು ಎಲ್ಲರ ಅಭಿಪ್ರಾಯ. ಸಾಲದ ಸುಳಿಗೆ ಸಿಲುಕಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಘಟನೆ ನಡೆಯುತ್ತಲೇ ಇರುತ್ತವೆ. ಆದರೆ ಪಶ್ಚಿಮ ಬಂಗಾಳದಲ್ಲಿ ಮಾತ್ರ ರೈತರು ಹೆಚ್ಚು ಆದಾಯ ಪಡೆಯುತ್ತಿದ್ದಾರಂತೆ ಕಳೆದ 8 ವರ್ಷಗಳಲ್ಲಿ ಪಶ್ಚಿಮ ಬಂಗಾಳ ರಾಜ್ಯದ ರೈತರ ಆದಾಯ ಮೂರು ಪಟ್ಟು ಹೆಚ್ಚಾಗಿದೆಯಂತೆ. ಹಾಗಂತ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರೇ ಹೇಳಿದ್ದಾರೆ.

  ಕೋಲ್ಕತ್ತಾದಲ್ಲಿ ನಡೆ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಮತಾ ಬ್ಯಾನರ್ಜಿ,   ಪಶ್ಚಿಮ ಬಂಗಾಳದಲ್ಲಿ ಕಳೆದ ಎಂಟು ವರ್ಷಗಳಲ್ಲಿ ರೈತರ ಆದಾಯದಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡು ಬಂದಿದೆ. ರೈತರು ಮೂರು ಪಟ್ಟು ಆದಾಯ ಹೆಚ್ಚಿಸಿಕೊಂಡಿದ್ದಾರೆ ಎಂದು ಹೇಳಿದರು. 2010-11ನೇ ಸಾಲಿನಲ್ಲಿ ಪಶ್ಚಿಮ ಬಂಗಾಳ ರಾಜ್ಯದ ರೈತರ ವಾರ್ಷಿಕ ಆದಾಯ 91 ಸಾವಿರ ರೂಪಾಯಿ ಆಗಿತ್ತು. ಆದರೆ, 2018ರ ವೇಳೆಗೆ ಅದು 2 ಲಕ್ಷ 91 ಸಾವಿರ ರೂಪಾಯಿ ಆಗಿದೆ. ಸರಾಸರಿ ಆದಾಯದಲ್ಲಿ ಮೂರುಪಟ್ಟು ಹೆಚ್ಚಳವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದರು.

 

%d bloggers like this: