You cannot copy content of this page.
. . .

ಮೈಸೂರು: ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

 ಮೈಸೂರಿನಲ್ಲಿ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಬನ್ನೂರಿನ ನೀರಾವರಿ ನಿಗಮದ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ರೈತರು ಸರ್ಕಾರ ಹಾಗೂ ನೀರಾವರಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

 ರೈತ ಮುಖಂಡ ಬನ್ನೂರು ನಾರಾಯಣ್‍ ಮಾತನಾಡಿ, ಕೆಆರ್‍ಎಸ್‍ ಅಣೆಕಟ್ಟೆಯಲ್ಲಿ 120 ಅಡಿಗಳಷ್ಟು ನೀರು ಇದೆ. ಬೇಸಿಗೆ ಬೆಳೆಗೆ ನಾಲೆಗಳಿಗೆ ನೀರು ಹರಿಸಬಹುದೆಂಬ ನಿರೀಕ್ಷೆಯಲ್ಲಿ ರೈತರಿದ್ದಾರೆ. ಆದರೆ, ಜನಪ್ರತಿನಿಧಿಗಳು ಮೋಜು ಮಸ್ತಿ ಮಾಡಿಕೊಂಡಿದ್ದಾರೆ ಕಿಡಿಕಾರಿದರು.

 ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ. ಕೂಡಲೇ ಅಧಿಕಾರಿಗಳ ಸಭೆ ನಡೆಸಿ ನಾಲೆಗಳಿಗೆ ನೀರು ಹರಿಸಬೇಕು. ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಮನವಿ ಸ್ವೀಕರಿಸಬೇಕು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದಿದ್ದಲ್ಲಿ, ಕಚೇರಿಗೆ ಬೀಗ ಹಾಕಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

 

%d bloggers like this: