You cannot copy content of this page.
. . .

    ಜೆಡಿಎಸ್ ಕಾರ್ಯಕರ್ತರಿಗೆ ಪ್ರಾಣ ಬೆದರಿಕೆ ಹಾಕಿದ ಆರೋಪದ ಮೇಲೆ ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
   ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಣ ಹಂಚಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ಪ್ರಾಣ ಬೆದರಿಕೆ ಒಡ್ಡಿರುವ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆ.ಆರ್.ಪೇಟೆ ಉಪಚುನಾವಣೆ ಹಿನ್ನಲೆಯಲ್ಲಿ ಹಲವು ಗ್ರಾಮಗಳಲ್ಲಿ ಮತದಾರರಿಗೆ ಹಣ ಹಂಚಿರುವ ವಿಷಯವನ್ನು ಯಾರಿಗಾದರೂ ಹೇಳಿದರೆ ಜೀವ ತೆಗೆಯುವುದಾಗಿ ಬುಧವಾರ ರಾತ್ರಿ ಶಾಸಕ ಪ್ರೀತಂ ಗೌಡ, ಶ್ರವಣಬೆಳಗೊಳ ಠಾಣೆ ಎಸ್‌ಐ ಪುತ್ರ, ಕ್ವಾಲಿಟಿ ಬಾರ್ ಶರತ್ ಹಾಗೂ ಇತರರು ಬೆದರಿಕೆ ಹಾಕಿದ್ದಾರೆ ಎಂದು ಶ್ರವಣಬೆಳಗೊಳದ ಗೌಡರ ಬೀದಿ ನಿವಾಸಿಗಳಾದ ಪ್ರಭಾಕರ್ ಮತ್ತು ವಡ್ಡರಹಳ್ಳಿ ಗಣೇಶ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರೀತಂಗೌಡ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದಾರೆ.

 

%d bloggers like this: