You cannot copy content of this page.
. . .

ದೆಹಲಿಯಲ್ಲಿ ಅಗ್ನಿ ದುರಂತ; ಸಾವಿನ ಸಂಖ್ಯೆ ೪೩ಕ್ಕೆ ಏರಿಕೆ

ಇಂದು ಬೆಳ್ಳಂಬೆಳಗ್ಗೆ ದೆಹಲಿಯ ರಾಣಿ ಜಾನ್ಸಿ ರಸ್ತೆ ಬಳಿಯ ಅನಾಜ್ ಮಂಡಿ ಪ್ರದೇಶದ ಮೂರು ಮಹಡಿಗಳಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ೪೩ ಮಂದಿ ಬಲಿಯಾಗಿದ್ದಾರೆ.

ಮಹಡಿಗಳ ಕಟ್ಟಡದೊಳಗೆ ಇನ್ನೂ ಹಲವರು ಸಿಲುಕಿಕೊಂಡಿದ್ದಾರೆ. ಈವರೆಗೂ ೫೦ಕ್ಕೂ ಹೆಚ್ಚು ಮಂದಿಯನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದು, ಕಾರ್ಯಾಚರಣೆ ಮುಂದುವರಿಸಿದ್ದಾರೆ. ಗಾಯಾಳುಗಳನ್ನು ಆರ್ಎಂಎಲ್, ಹಿಂದೂ ರಾವ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ಕುರಿತು ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ದೆಹಲಿಯ ಅನಾಜ್ ಮಂಡಿ ಪ್ರದೇಶದಲ್ಲಿ ನಡೆದಿರುವ ಅಗ್ನಿ ದುರಂತ ಭಯಾನಕವಾಗಿದೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಘಟನಾ ಸ್ಥಳದಲ್ಲಿ ಅಧಿಕಾರಿಗಳು ಅಗತ್ಯವಿರುವ ಎಲ್ಲ ಸಹಾಯವನ್ನು ಮಾಡುತ್ತಿದ್ದಾರೆಎಂದು ಹೇಳಿದ್ದಾರೆ.

 

%d bloggers like this: