You cannot copy content of this page.
. . .

‘ಗೋ ಬ್ಯಾಕ್‍ ಅಮಿತ್‍ ಶಾ’ ಎಂದ ಪ್ರತಿಭಟನಾಕಾರರು ಪೊಲೀಸರ ವಶಕ್ಕೆ

 ಸಿಎಎ ಪರವಾಗಿ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್‍ ಶಾ ಹುಬ್ಬಳ್ಳಿಗೆ ಭೇಟಿ ನೀಡುವುದನ್ನು ವಿರೋಧಿಸಿ ಸಂವಿಧಾನ ರಕ್ಷಣಾ ಸಮಿತಿ ಪ್ರತಿಭಟನೆ ನಡೆಯಿತು. ಪೊಲೀಸರ ಅನುಮತಿ ನಿರಾಕರಣೆಯ ನಡುವೆಯೂಗೋ ಬ್ಯಾಕ್ ಅಮಿತ್ ಶಾ’ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಲು ಮುಂದಾದ ಸಮಿತಿಯ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು.

 ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ಬಳಿ ನೆರೆದಿದ್ದ ಪ್ರತಿಭಟನಾಕಾರರನ್ನು ತಡೆದು ಪೊಲೀಸರು ಪ್ರತಿಭಟನೆ ನಡೆಸದಂತೆ ಮನವಿ ಮಾಡಿದರು. ಇದನ್ನು ಲೆಕ್ಕಿಸದೇ ಪ್ರತಿಭಟನೆಗೆ ಮುಂದಾದವರನ್ನು ವಶಕ್ಕೆ ಪಡೆದು ಬಸ್‍ನಲ್ಲಿ ಕರೆದುಕೊಂಡು ಹೋದರು.

 

%d bloggers like this: