You cannot copy content of this page.
. . .

 ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ ಎಂದು ಆರೋಪಿಸಿ, ಅದರ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಹೈಕೋರ್ಟ್‍ ವಿಚಾರಣೆ ನಡೆಸಿದೆ. ಈ ವೇಳೆ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದೆ.

ಹೈಕೋರ್ಟ್‍ನ ಪ್ರಶ್ನೆಗಳು ಇಂತಿವೆ..

 ಪ್ರತಿಭಟನೆ ನಡೆಸಲು ಕೆಲ ಸಂಘಟನೆಗಳಿಗೆ ಅವಕಾಶ ನೀಡುವ ಸರ್ಕಾರ ರಾತ್ರೋರಾತ್ರಿ ಅವಕಾಶ ನಿರಾಕರಿಸಿರುವುದು ಏಕೆ

 ಪ್ರತಿಭಟನೆಗೆ ನೀಡಿರುವ ಅವಕಾಶವನ್ನು ಸೆಕ್ಷನ್‌ 144 ಜಾರಿಯಾಗುತ್ತಲೇ ರದ್ದು ಮಾಡಲು ಸಾಧ್ಯವೇ?

 ಶಾಲೆಯ ವಿದ್ಯಾರ್ಥಿಗಳನ್ನೂ ಪೊಲೀಸರು ಠಾಣೆಗಳಿಗೆ ಕರೆದೊಯ್ಯುತ್ತಾರೆಯೇ?

 ಎಲ್ಲ ಪ್ರತಿಭಟನೆಗಳೂ ಶಾಂತಿ ಭಂಗ ಉಂಟು ಮಾಡುತ್ತವೆ ಎಂದು ಸರ್ಕಾರವೇನಾದರೂ ಭಾವಿಸಿದೆಯೇ?

 ಪ್ರತಿ ಹೋರಾಟಗಳನ್ನೂ ತಡೆಯಲು ಸರ್ಕಾರಕ್ಕೆ ಸಾಧ್ಯವಿದೆಯೇ?

 ಪ್ರತಿಭಟನೆಗೆ ನೀಡಿದ ಅವಕಾಶವನ್ನು ಏಕಾಏಕಿ ರದ್ದು ಮಾಡಲು ಹೇಗೆ ಸಾಧ್ಯ? ಎಂದು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌ ಓಕಾ ಅವರು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. 

 

%d bloggers like this: