You cannot copy content of this page.
. . .

  ಅಕ್ರಮವಾಗಿ ಕಡವೆ ಮಾಂಸ ಸಂಗ್ರಹ ಮಾಡಿದ್ದ ಹುಣಸೂರು ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ವ್ಯಕ್ತಿಯೊಬ್ಬನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ 80 ಕೆ.ಜಿ ಕಡವೆ ಮಾಂಸ ವಶಪಡಿಸಿಕೊಂಡಿದ್ದಾರೆ.

  ಹುಣಸೂರು ವನ್ಯಜೀವಿ ವಲಯದ ಲಕ್ಷ್ಮೀಪುರ ಗ್ರಾಮದ ಸ್ವಾಮಿ ಅಲಿಯಾಸ್ ಕುಳ್ಳೇಗೌಡ ಬಂಧಿತ ಆರೋಪಿ. ಈತ ಅಕ್ರಮವಾಗಿ ಕಡವೆ ಬೇಟೆಯಾಡಿ ಅದರ ಮಾಂಸವನ್ನು ಹೊಗೆಸೊಪ್ಪು ಬ್ಯಾರನ್​​ನಲ್ಲಿ ಸಂಗ್ರಹಿಸಿಟ್ಟಿದ್ದ. ಈ ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕಡವೆ ಮಾಂಸ, ಕಡವೆ ತಲೆ ಹಾಗೂ ಕೃತ್ಯಕ್ಕೆ ಬಳಸಿದ್ದ ಮಚ್ಚನ್ನು ವಶಪಡಿಸಿಕೊಂಡಿದ್ದಾರೆ.

   ಕೃತ್ಯದಲ್ಲಿ ಭಾಗಿಯಾಗಿದ್ದ 4 ಜನರು ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

 

%d bloggers like this: