You cannot copy content of this page.
. . .

  ಮಹದಾಯಿ ವಿವಾದದ ಕುರಿತು ಗೋವಾ ಮತ್ತೆ ಕ್ಯಾತೆ ತೆಗೆದಿದೆ. ಕಳಸಾ-ಬಂಡೂರಿ ಯೋಜನೆಗೆ ಒಪ್ಪಿಗೆ ಕೊಟ್ಟಿರುವುದನ್ನು ವಿರೋಧಿಸಿ ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದೆ. ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಲು ಕೇಂದ್ರ ಸರ್ಕಾರ ಈ ಯೋಜನೆಗೆ ಒಪ್ಪಿಗೆ ನೀಡಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

 ಮಹದಾಯಿ ವಿವಾದದ ಕೇಸ್‍ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಮಹದಾಯಿ ನ್ಯಾಯಾಧೀಕರಣದ ಮುಂದೆಯೂ ವಿಚಾರಣೆ ಬಾಕಿ ಇದೆ. ಇಂತಹ ಸಂದರ್ಭದಲ್ಲಿ ಗೋವಾದ ವಾದವನ್ನು ಆಲಿಸದೇ ಏಕಪಕ್ಷೀಯವಾಗಿ ಯೋಜನೆಗೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಗೋವಾ ಕಾಂಗ್ರೆಸ್‍ ಆರೋಪಿಸಿದೆ. ಮಹದಾಯಿ ನದಿ ನೀರನ್ನು ತಿರುಗಿಸಲು ಗೋವಾ ಜನರು ಒಪ್ಪುವುದಿಲ್ಲ. ಕೂಡಲೇ ಕೇಂದ್ರ ಸರ್ಕಾರ ಈ ಸಂಬಂಧ ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಗೋವಾ ಕಾಂಗ್ರೆಸ್‍ ಆಗ್ರಹಿಸಿದೆ.

 

%d bloggers like this: