You cannot copy content of this page.
. . .

ಹಾಲು ಉತ್ಪಾದಕರಿಗೆ ಸಂಕ್ರಾಂತಿ ಬಂಪರ್: 2.50 ರೂ. ಏರಿಕೆ

   ಉತ್ಪಾದಕರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ 2.50 ರೂಪಾಯಿ ಹೆಚ್ಚುವರಿಯಾಗಿ ನೀಡಲು ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ.
ಮಂಗಳವಾರ ನಡೆದ ಮೈಮುಲ್ ನ ಆಡಳಿತ ಮಂಡಳಿ ವಿಶೇಷ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

  ಹೆಚ್ಚಳದ ನಂತರ ರೈತರಿಗೆ ಪ್ರತಿ ಲೀಟರ್‍ ಹಾಲಿಗೆ 28 ರೂಪಾಯಿ ನೀಡಲಾಗುತ್ತದೆ. ಆದರೆ ಗ್ರಾಹಕರಿಗೆ ನೀಡುವ ಹಾಲಿ ದರದ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಬಗ್ಗೆ ಮಾತನಾಡಿರುವ ಮೈಮುಲ್ ಅಧ್ಯಕ್ಷ ಎಸ್.ಸಿದ್ದೇಗೌಡ, ರೈತರು ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸಲು ದರ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.

 

Leave a Reply

 

%d bloggers like this: