You cannot copy content of this page.
. . .

ಗ್ರಾಹಕರಿಗೆ ಮತ್ತೊಂದು ಶಾಕ್..!; ನಂದಿನಿ ಹಾಲು 2-3 ರೂ. ಹೆಚ್ಚಳ ಸಾಧ್ಯತೆ

   ಈರುಳ್ಳಿ, ಪೆಟ್ರೋಲ್‍, ಡೀಸೆಲ್‍, ಅಡುಗೆ ಅನಿಲ ಹೀಗೆ ಬೆಲೆ ಏರಿಕೆಯ ಬಿಸಿ ಅನುಭವಿಸುತ್ತಿರುವ ಗ್ರಾಹಕರಿಗೆ ಸದ್ಯದಲ್ಲೇ ಮತ್ತೊಂದು ಶಾಕ್ ಕಾದಿದೆ. ಯಾಕಂದ್ರೆ ಶೀಘ್ರದಲ್ಲೇ ನಂದಿನಿ ಹಾಲು ಲೀಟರ್‍ ಗೆ 2 ರಿಂದ 3 ರೂಪಾಯಿ ಹೆಚ್ಚಳ ಮಾಡಲು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ ಸಿದ್ಧತೆ ನಡೆಸಿದೆ.

  ರಾಜ್ಯದ 14 ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವಂತೆ ಕೆಎಂಎಫ್‌ಗೆ ಪ್ರಸ್ತಾವನೆ ಸಲ್ಲಿಸಿವೆ. ಹೀಗಾಗಿ ಜನವರಿ 17 ರಂದು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳು ನಿರ್ಧರಿಸಲಾಗಿದೆ. ಕೆಎಂಎಫ್ ಕೈಗೊಳ್ಳುವ ನಿರ್ಧಾರವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಒಕ್ಕೂಟಗಳು ತಿಳಿಸಿವೆ.

  ಹಾಲು ಒಕ್ಕೂಟಗಳ ನಿರ್ವಹಣೆ, ಹೈನುಗಾರರ ಉತ್ಪಾದನಾ ವೆಚ್ಚ, ನೌಕರರ ಸಂಬಳ, ಹಾಲು ಮತ್ತು ಹಾಲಿನ ಉತ್ಪನ್ನಗಳ ಸಾಗಾಣಿಕೆ ವೆಚ್ಚ ಸೇರಿದಂತೆ ಎಲ್ಲಾ ವೆಚ್ಚದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ನಂದಿನಿ ಹಾಲಿನ ದರ ಏರಿಕೆ ಮಾಡಬೇಕು ಎಂಬುದು ಒಕ್ಕೂಟಗಳ ಬೇಡಿಕೆ.

  ಮೂರು ವರ್ಷಗಳ ಹಿಂದೆ 2 ರೂ ಹೆಚ್ಚಳ ಮಾಡಲಾಗಿತ್ತು ಆ ನಂತರ ಮೂರು ವರ್ಷಗಳಿಂದ ಯಾವುದೇ ದರ ಏರಿಕೆ ಮಾಡಿಲ್ಲ. ಈ ಬಾರಿ ಪ್ರತಿ ಲೀಟರ್‌ಗೆ 2-3 ರೂ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಹಾಲಿನ ದರ ಹೆಚ್ಚಳಗೊಂಡರೆ ಮಜ್ಜಿಗೆ, ಮೊಸರು ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆಯೂ ಏರಿಕೆಯಾಗಲಿದೆ.

   ರಾಜ್ಯದಲ್ಲಿ ಒಟ್ಟು 16,380 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, ಪ್ರತಿದಿನ 78 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದರಲ್ಲಿ 37 ಲಕ್ಷ ಲೀಟರ್ ಹಾಲನ್ನು ನಿತ್ಯ ಮಾರಾಟ ಮಾಡಲಾಗುತ್ತಿದೆ.

 

%d bloggers like this: