You cannot copy content of this page.
. . .

ಶೀಘ್ರದಲ್ಲೇ ಹಾಲಿನ ದರ ಏರಿಕೆ : ಖಚಿತಪಡಿಸಿದ ಕೆಎಂಎಫ್‍ ಅಧ್ಯಕ್ಷ

  ನಂದಿನಿ ಹಾಲಿನ ದರ ಲೀಟರ್‍ ಗೆ 2 ರಿಂದ 3 ರೂಪಾಯಿ ಏರಿಕೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರೇ ದೃಢಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಹಲವು ದಿನಗಳಿಂದ ನಂದಿನಿ ಹಾಲಿನ ದರ ಹೆಚ್ಚಳ ಮಾಡಬೇಕು ಎಂಬ ಪ್ರಸ್ತಾವನೆ ಮಹಾಮಂಡಳದ ಮುಂದಿತ್ತು. ಈಗ ಅದಕ್ಕೆ ಕಾಲ ಕೂಡಿ ಬಂದಿದೆ. ಲೀಟರ್‍ ಗೆ 2 ರಿಂದ 3 ರುಪಾಯಿ ಹೆಚ್ಚಳವಾಗಲಿದೆ ಎಂದು ಅವರು ಹೇಳಿದ್ದಾರೆ.

  ರಾಜ್ಯದ 14 ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ಕೆಎಂಎಎಫ್‍ ಗೆ ಪ್ರಸ್ತಾವನೆ ಸಲ್ಲಿಸಿದ್ದವು. ಇದನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಹೆಚ್ಚಳ ಮಾಡಲಾಗುತ್ತದೆ. ಮುಖ್ಯಮಂತ್ರಿಯವರು ಒಪ್ಪಿಗೆ ಕೊಟ್ಟ ತಕ್ಷಣ ಅಧಿಕೃತವಾಗಿ ದರ ಹೆಚ್ಚಳವಾಗಲಿದೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

 

%d bloggers like this: